ಸರ್ಕಾರಿ ಭೂಮಿ ಅಕ್ರಮ ಮಂಜೂರು ರದ್ದು ಸ್ವಾಗತಾರ್ಹ

0
396

ಚಿಕ್ಕಮಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿಸಿಕೊಂಡಿದ್ದ 5 ಅಕ್ರಮ ಭೂ ಮಂಜೂರಾತಿಯನ್ನು ಕಂದಾಯ ಉಪವಿಭಾಗಾಧಿಕಾರಿ ಡಾ. ಎಚ್. ಎಲ್. ನಾಗರಾಜ್ ರದ್ದುಪಡಿಸಿ ಆದೇಶ ಹೊರಡಿಸಿದ್ದು, ಅವರ ಈ ಶ್ಲಾಘನೀಯ ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಗೌಸ್ ಮೊಹಿದ್ದೀನ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 9 ಭೂ ಅಕ್ರಮ ಮಂಜೂರಾತಿ ಸಂಬಂಧ ಸಂವಿಧಾನ ಸಂರಕ್ಷಣಾ ಸಮಿತಿ ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಸಿತ್ತು. ಈ ಪ್ರಕರಣಗಳಲ್ಲಿ 5 ಪ್ರಕರಣ ಪರಿಶೀಲನೆ ನಡೆಸಿ 5 ಭೂ ಮಂಜೂರಾತಿಯನ್ನು ರದ್ದುಪಡಿಸಲಾಗಿದೆ. ಉಳಿದ 4 ಪ್ರಕರಣಗಳನ್ನು ಪರಿಶೀಲಿಸುವಂತೆ ಸಂಬಂಧಪಟ್ಟ ತಹಶೀಲ್ದಾರ್‌ಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲಾದ್ಯಂತ ಬಡವರು ಜೀವನೋಪಾಯಕ್ಕಾಗಿ ಸರ್ಕಾರಿ ಜಮೀನು ಕೃಷಿ ಮಾಡಿ ಮಂಜೂ ರಾತಿಗಾಗಿ ಫಾರಂ. ನಂ. 53, 57ರಲ್ಲಿ ಅರ್ಜಿ ಸಲ್ಲಿಸಿ ದಶಕ ಕಳೆದಿದ್ದರೂ ಇಂತಹ ಸಣ್ಣ ಬಡ ಕೃಷಿಕರಿಗೆ ಇದುವರೆಗೂ ಭೂಮಿ ಮಂಜೂರಾಗಿಲ್ಲ. ಅಲ್ಲದೇ ಜಿಲ್ಲಾದ್ಯಂತ ಇರುವ ನಿವೇಶನ ರಹಿತರಿಗೆ ನಿವೇಶನ ಒದಗಿಸಲೂ ಸರಕಾರಿ ಜಾಗ ಸಿಗುತ್ತಿಲ್ಲ. ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಭೂ ಮಂಜೂರಾತಿ ಮಾಡಿಸಿಕೊಳ್ಳುತ್ತಿದ್ದು ಇದಕ್ಕೆ ಜಿಲ್ಲಾಡಳಿತ ಕಡಿವಾಣ ಹಾಕಬೇಕು ಇಂತಹ ಪ್ರಕರಣಗಳು ಮತ್ತೇ ಮರುಕಳಿಸಿದರೆ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಹೋರಾಟ ರೂಪಿಸುವುದಾಗಿ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯದರ್ಶಿ ಕೃಷ್ಣಮೂರ್ತಿ ಸೇರಿದಂತೆ ಮುಖಂಡರಾದ ಗಣೇಶ್, ಗೋಪಾಲ್‌ಗೌಡ, ಶೋಯಿಬುಲ್ಲಾ ಹಸನ್, ದಿವಾಕರ್ ಇದ್ದರು.

ಜಾಹಿರಾತು

LEAVE A REPLY

Please enter your comment!
Please enter your name here