ಸರ್ಕಾರಿ ಸೌಲಭ್ಯ ಈ ಹಿಂದೆ ಪಡೆಯುತ್ತಿರುವ ಫಲಾನುಭವಿಗಳು ಆಧಾರ್ ಸಂಖ್ಯೆ ಜೋಡಣೆ ಮಾಡಿಕೊಳ್ಳಿ: ವಿಎ ಕೌಶಿಕ್

0
356

ಹೊಸನಗರ: ತಾಲ್ಲೂಕು ಜೇನಿ ಗ್ರಾಮ ಹಾಗೂ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಈ ಹಿಂದಿನಿಂದಲ್ಲೂ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಅಂಗವಿಕಲ ವೇತನ, ವೃದ್ಧಾಪ್ಯ ವೇತನ, ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ಮೈತ್ರಿ ಹಾಗೂ ವಿಧವಾ ವೇತನ ಇನ್ನಿತರ ಸೌಲಭ್ಯಗಳನ್ನು ಪಡೆಯುತ್ತಿರುವವರು ಗ್ರಾಮ ಲೆಕ್ಕಾಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಸೌಲಭ್ಯಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಬೇಕೆಂದು ಜೇನಿ ಹಾಗೂ ಕಸಬಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿ ಕೌಶಿಕ್‌ರವರು ತಿಳಿಸಿದ್ದಾರೆ.

ಈ ಹಿಂದೆ ಇವರು ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿದ್ದು, ಪಡೆಯುತ್ತಿದ್ದವರು ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಆನ್‌ಲೈನ್‌ನಲ್ಲಿ ಜೋಡಣೆಯಾಗಿರುವುದಿಲ್ಲ ಆದ್ದರಿಂದ ನಮ್ಮ ಕಛೇರಿಗೆ ಆಗಮಿಸಿ ಬ್ಯಾಂಕ್ ಅಕೌಂಟ್ ನಂಬರ್ ಇರುವ ಪಾಸ್ ಪುಸ್ತಕದ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್, ಗುರುತಿನ ಚೀಟಿ ಜೆರಾಕ್ಸ್ ಪ್ರತಿಗಳನ್ನು ತಾವು ಖುದ್ದು ತಂದು ಕೊಡಬೇಕು. ಬರಲು ಅಸಾಧ್ಯವಾದರೆ ನೀವು ಮೊಬೈಲ್ ಫೋನ್ ಮೂಲಕ ಈ ನಂಬರ್‌ಗೆ 8971781048 ತಿಳಿಸಿದರೆ ನಾವೇ ನಿಮ್ಮ ಮನೆಗೆ ಭೇಟಿ ನೀಡಿ ಮೇಲಿನವುಗಳನ್ನು ಪಡೆದುಕೊಂಡು ಹೋಗುತ್ತೇವೆ ಎಂದು ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here