ಸರ್ಕಾರ ಬೆಳೆಹಾನಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಲು ಸುಧಾಕರ್ ಶೆಟ್ಟಿ ಒತ್ತಾಯ

0
159

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದಾಗಿ ಕಾಫಿ, ಅಡಕೆ, ಮೆಣಸು ಸೇರಿದಂತೆ ಫಸಲಿಗೆ ಬಂದ ಬೆಳೆ ಹಾನಿಯಾಗಿದೆ. ಇದರಿಂದಾಗಿ ರೈತರು, ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು ಸರ್ಕಾರವು ವಿಶೇಷ ಅಧಿಕಾರಿಯನ್ನು ನೇಮಿಸಿ ಬೆಳೆ ಹಾನಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಜೆಡಿಎಸ್ ಮುಖಂಡ ಸುಧಾಕರ್ ಶೆಟ್ಟಿ ಒತ್ತಾಯಿಸಿದರು.

ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆಹಾನಿ ಸಂಭವಿಸಿದ್ದು ಸರ್ಕಾರದ ಮಟ್ಟದಲ್ಲಿ ಅಧಿಕಾರಿಯನ್ನು ನೇಮಿಸಿ ಬೆಳೆಹಾನಿಯ ಬಗ್ಗೆ ಸಮೀಕ್ಷೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು, ಕಳೆದ ಬಾರಿಯಲ್ಲಿ ಸುರಿದ ಮಳೆಯಿಂದಾಗಿ ಆದ ಬೆಳೆೆ ಹಾನಿಗೆ ಸರ್ಕಾರ ಇದುವರೆಗೂ ಸೂಕ್ತ ಪರಿಹಾರ ನೀಡಿಲ್ಲ, ಜಿಲ್ಲೆಯ ಜನಪ್ರತಿನಿಧಿಗಳು ಮಲೆನಾಡಿನ ವಾಸ್ತವ ಸ್ಥಿತಿಗತಿಗಳು, ಬೆಳೆಗಾರರು, ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ದೂಷಿಸಿದರು.

ಮಲೆನಾಡಿನ ಜನರ ಬಗ್ಗೆ ಸರ್ಕಾರ ನಿರ್ಲಕ್ಷ್ಯದ ಧೋರಣೆ ತಳೆದಂತೆ ಕಾಣುತ್ತಿದೆ, ಬೆಳೆ ಹಾನಿ, ಮನೆ ಹಾನಿಗೆ ಸೂಕ್ತ ಪರಿಹಾರ ನೀಡಿಲ್ಲ, ಇದೀಗ ಮತ್ತೆ ಅಕಾಲಿಕ ಮಳೆಯಿಂದಾಗಿ ಮತ್ತಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದ್ದು ವಿಶೇಷ ಪ್ಯಾಕೇಜ್ ಜತೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here