ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ

0
70

ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮೇ -2022ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.

ಮೇ -23ರಂದು ಭದ್ರಾವತಿಯ ಮಿಲಿಟರಿ ಕ್ಯಾಂಪ್‍ನಲ್ಲಿರುವ ಪ್ರವಾಸಿ ಮಂದಿರದಲ್ಲಿ, ಮೇ – 27 ರಂದು ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಹಾಗೂ ಮೇ-31 ರಂದು ಹೊಸನಗರದ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಸಭೆ ನಡೆಯಲಿದೆ.

ಸಾರ್ವಜನಿಕರು ಸರ್ಕಾರಿ ಕರ್ತವ್ಯ ನಿರ್ವಹಿಸಲು ವಿಳಂಬ ಮತ್ತು ನಿರ್ಲಕ್ಷ್ಯ ತೋರಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಲಿಖಿತ ಅಹವಾಲು ಸಲ್ಲಿಸಬಹುದು ಎಂದು ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here