ಸೊರಬ : ಸಾಲಬಾಧೆಗೆ ಯುವ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಿರೇಕಸವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ಎಚ್.ಕೆ. ಮಹೇಶ್ (38) ಆತ್ಮಹತ್ಯೆಗೆ ಶರಣಾದ ಯುವ ರೈತನಾಗಿದ್ದು, ಅಕಾಲಿಕ ಮಳೆಯಿಂದಾಗಿ ನಿರೀಕ್ಷೆಗಿಂತ ಕಡಿಮೆ ಬೆಳೆ ಬಂದ ಹಿನ್ನೆಲೆ ಸುಮಾರು ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಬೆಳೆ ನಷ್ಟವಾಗಿತ್ತು. ಸಹಕಾರಿ ಸಂಘವೊಂದರಲ್ಲಿ 80 ಸಾವಿರ ರೂ., ಹಾಗೂ ಕೈಗಡವಾಗಿ ಸುಮಾರು 2 ಲಕ್ಷ ರೂ., ಸಾಲ ಮಾಡಿಕೊಂಡಿದ್ದನು ಎಂದು ತಿಳಿದು ಬಂದಿದ್ದು, ಬೆಳೆ ನಷ್ಟದಿಂದ ಸಾಲ ತೀರಿಸಲಾಗದೇ ತನ್ನ ಕೃಷಿ ಜಮೀನಿನಲ್ಲಿಯೇ ವಿಷ ಸೇವಿಸಿದ್ದಾನೆ.
ತಕ್ಷಣ ಶಿರಾಳಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related
You cannot copy content of this page