ಸಾಲಬಾಧೆ ; ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ರೈತ ಆತ್ಮಹತ್ಯೆ !

0
1195

ರಿಪ್ಪನ್‌ಪೇಟೆ: ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದ ರೈತನೋರ್ವ ಶುಂಠಿ ಬೆಳೆಗೆ ಬೆಲೆ ಇಲ್ಲದೆ ಮಾಡಿದ ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಸೆಗೊಂಡು ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಕೋಟೆತಾರಿಗ – ಹಿಂಡ್ಲೆಮನೆ ರಸ್ತೆಯ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತನನ್ನು ವಸಂತ (32) ಎಂದು ಗುರುತಿಸಲಾಗಿದೆ. ಮೃತನಿಗೆ ಕಳೆದ ನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ದು ಪತ್ನಿ ಮತ್ತು ಒಂದು ವರ್ಷದ ಮಗು ಇದೆ ಎನ್ನಲಾಗಿದೆ.

ಮೃತರ ಸಂಬಂಧಿಕರು ನೀಡಿದ ದೂರಿನನ್ವಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here