ಹೊಸನಗರ: ತಾಲೂಕಿನ ಅಲಗೇರಿಮಂಡ್ರಿ ಗ್ರಾಮದ ರೈತರೊಬ್ಬರು ಸಾಲಬಾಧೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಾಗರಾಜ್ (58) ಮೃತ ರೈತ. ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ಅಸ್ವಸ್ಥಗೊಂಡಿದ್ದ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನಾಗರಾಜ್ ಅವರು ಜಮೀನಿನ ಅಭಿವೃದ್ಧಿಗೋಸ್ಕರ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರು ಎನ್ನಲಾಗಿದೆ. ಈ ಘಟನೆ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related