23.2 C
Shimoga
Sunday, November 27, 2022

ಸಾಹಿತಿ ಭಗವಾನ್ ಬಂಧನಕ್ಕೆ ಜಾಮೀನು ರಹಿತ ವಾರಂಟ್ !

ಸಾಗರ: ‘ರಾಮ ಮಂದಿರ ಯಾಕೆ ಬೇಡ’ ಎಂಬ ಕೃತಿಯ ವಿವಾದದ ಹಿನ್ನೆಲೆಯಲ್ಲಿ ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣದಲ್ಲಿ ಬರಹಗಾರ, ವಿವಾದಾತ್ಮಕ ಸಾಹಿತಿ ಪ್ರೊ. ಕೆ.ಎಸ್ ಭಗವಾನ್ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಬುಧವಾರ ಜಾರಿಯಾಗಿದೆ.

ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ಸದಸ್ಯ ಹಳೆ ಇಕ್ಕೇರಿಯ ಮಹಾಬಲೇಶ್ವರ ಎಂಬ ಸಂಘ ಪರಿವಾದ ಕಾರ್ಯಕರ್ತ ನ್ಯಾಯಾಲಯದಲ್ಲಿ ಖಾಸಗಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿರುವ ನ್ಯಾಯಾಲಯ ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(ಎ) ಅಡಿಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿಕೊಂಡಿತ್ತು.

ಗುರುವಾರ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮೈಸೂರು ಎಸ್‌ಪಿ ಮೂಲಕ ಸಮನ್ಸ್ ಜಾರಿ ಮಾಡಿದ್ದರೂ ಅವರು ಹಾಜರಾಗಿಲ್ಲದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ್ ಭಗಾಡೆ ಜಾಮೀನುರಹಿತ ಬಂಧನ ವಾರೆಂಟ್‌ಗೆ ಆದೇಶಿಸಿದ್ದಾರೆ.

ದೂರುದಾರರ ಪರವಾಗಿ ವಕೀಲ ಕೆ.ವಿ.ಪ್ರವೀಣಕುಮಾರ್ ವಾದಿಸುತ್ತಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!