ಸುಸೂತ್ರವಾಗಿ ಪ್ರೌಢಶಾಲೆಗಳು ಆರಂಭ ; ಡಿಸಿ ಡಾ.ಆರ್.ಸೆಲ್ವಮಣಿ

0
122

ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರ ಎಲ್ಲಾ ಪ್ರೌಢಶಾಲೆಗಳು ಸುಸೂತ್ರವಾಗಿ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಅವರು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮಿಪ್ರಸಾದ್ ಅವರೊಂದಿಗೆ ನಗರದ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಈಗಾಗಲೇ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲು ಅಧಿಕಾರಿಗಳ ತಂಡಗಳನ್ನು ಸಹ ರಚಿಸಲಾಗಿದ್ದು, ಸುಗಮವಾಗಿ ಶಾಲೆಗಳು ನಡೆದಿವೆ.

ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಕಾನೂನು ಸುವ್ಯವಸ್ಥೆ ಪಾಲಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here