Home Accident ಸೈಕಲ್’ಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್ ; ಪತ್ರಿಕಾ ವಿತರಕ ಸಾವು !
ಸಾಗರ: ಸಾಗರದಿಂದ ಯಲ್ಲಾಪುರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಪತ್ರಿಕಾ ವಿತರಕ ಸ್ಥಳದಲ್ಲೆ ಮೃತಪಟ್ಟ ಘಟನೆ ಇಂದು ಬೆಳಗಿನಜಾವ ಸಾಗರದ ಪ್ರವಾಸಿ ಮಂದಿರದ ಬಳಿ ನಡೆದಿದೆ.
ಬೆಳಲಮಕ್ಕಿ ನಿವಾಸಿ ಗಣೇಶ್ (25)ಮೃತ ದುರ್ದೈವಿ. ಪಟ್ಟಣದಲ್ಲಿ ಪತ್ರಿಕಾ ವಿತರಕನಾಗಿ ಕಳೆದ 10 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಇಂದು ಬೆಳಗಿನ ಜಾವ 5 ಗಂಟೆಗೆ ಪತ್ರಿಕೆ ವಿತರಿಸಲು ಹೋಗುವಾಗ ಬಸ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಸೈಕಲ್ ಹಿಂಬದಿಯ ಸವಾರ ರಾಹುಲ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತಾಪ:
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರ ಸಂತಾಪ ಸೂಚಿಸಿದ್ದು, ಮೃತ ಗಣೇಶ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸಂಘದ ಅಧ್ಯಕ್ಷ ಕೆ.ವಿ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ.ಟಿ.ಅರುಣ್, ರಾಜ್ಯ ಸಮಿತಿ ಸದಸ್ಯ ಎನ್.ರವಿಕುಮಾರ್ ಒತ್ತಾಯಿಸಿದ್ದಾರೆ.
Related