ಸೊರಬ: ನೌಕರರ ಮುಷ್ಕರದ ನಡುವೆಯು ಪ್ರಯಾಣಿಕರಿಗೆ ಸೇವೆ ಒದಗಿಸಿದ ಒಂದು KSRTC ಬಸ್

0
538

ಸೊರಬ: ಸಾರಿಗೆ ನೌಕರರ ಮುಷ್ಕರದ ನಡುವೆಯು ಪೊಲೀಸ್ ಭದ್ರತೆಯಲ್ಲಿ ಗುರುವಾರ ಬೆಳಗ್ಗೆ ಒಂದು ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರಿಗೆ ಸೇವೆ ಒದಗಿಸಿತು.

ಸಾಗರದಿಂದ ಉಳವಿ ಮಾರ್ಗವಾಗಿ ಪಟ್ಟಣಕ್ಕೆ ಆಗಮಿಸಿದ ಸಾರಿಗೆ ಬಸ್ ನಲ್ಲಿ ವಿದ್ಯಾರ್ಥಿಗಳು, ನೌಕರರು ಆಗಮಿಸಿದರು.

ಬಹುತೇಕ ಸಾರಿಗೆ ನೌಕರರು ಕರ್ತವ್ಯಕ್ಕೆ ಗೈರಾಗಿದ್ದು, ಖಾಸಗಿ ಬಸ್ ಗಳು ಎಂದಿನಂತೆ ಸಂಚರಿಸುತ್ತಿವೆ.

ಮುಷ್ಕರವನ್ನೇ ಬಂಡವಾಳ ಮಾಡಿಕೊಂಡ ಕೆಲ ಖಾಸಗಿ ಬಸ್ ನವರು ಬೆಂಗಳೂರು ಸೇರಿದಂತೆ ದೂರದ ಊರಿಗೆ ತೆರಳುವ ಪ್ರಯಾಣಿಕರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಸಹ ಕೇಳಿಬರುತ್ತಿದೆ.

ಜಾಹಿರಾತು

LEAVE A REPLY

Please enter your comment!
Please enter your name here