20.6 C
Shimoga
Friday, December 9, 2022

ಸ್ಪ್ರಿಂಕ್ಲರ್ ಸೆಟ್ ಯೋಜನೆ ಅರ್ಜಿ ಅವಧಿ ವಿಸ್ತರಣೆ


ಶಿವಮೊಗ್ಗ : ಭಾರತ ಸಂವಿಧಾನ ಅನುಚ್ಚೇದ 275(1) ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಸ್ಪ್ರಿಂಕ್ಲರ್ ಸೆಟ್ ಕಾರ್ಯಕ್ರಮ ಅನುಷ್ಟಾನಗೊಳಿಸಲು ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿಸೆಂಬರ್ 14 ರವರೆಗೆ ವಿಸ್ತರಿಸಲಾಗಿದೆ.


ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಡಿ.14 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅಜ್ಜಪ್ಪ ಹೆಚ್.ಇ ತಿಳಿಸಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!