ಸ್ವಚ್ಛ ವಿದ್ಯಾಲಯ ಪ್ರಶಸ್ತಿ ಪ್ರದಾನ

0
110

ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಆಯ್ಕೆಯಾದ 38 ಶಾಲೆಗಳ ಮುಖ್ಯ ಶಿಕ್ಷಕರುಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಆರ್ ಸೆಲ್ವಮಣಿ ಇವರು ಜೂ.29 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲೆಯ ಎಲ್ಲಾ ಶಾಲೆಗಳು ಪ್ಲಾಸ್ಟಿಕ್ ಮುಕ್ತವಾಗಬೇಕು, ಪೌಷ್ಠಿಕ ವನವನ್ನು ಬೆಳಸಬೇಕು, ಪ್ರತಿ ಮಗುವಿಗೂ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು ಎಂದು ಹಾಜರಿದ್ದ ಶಾಲಾ ಮುಖ್ಯಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ, ಶಿವಮೊಗ್ಗದ ಡಿ.ವೈ.ಪಿ.ಸಿ ಗಣಪತಿ ಇವರು ಸ್ವಾಗತಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಪ್ರಶಸ್ತಿ ಪಡೆದ ಶಾಲಾ ಮುಖ್ಯ ಶಿಕ್ಷಕರು, ಎಸ್‍ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here