ಹಳಿ ಮೇಲೆ ಫೋನ್‌ನಲ್ಲಿ ಮಗನೊಂದಿಗೆ ಮಾತನಾಡಿಕೊಂಡು ಹೊರಟಿದ್ದ ಮಹಿಳೆಗೆ ರೈಲು ಡಿಕ್ಕಿ ; ಸ್ಥಳದಲ್ಲೇ ಸಾವು !

0
535

ಭದ್ರಾವತಿ: ತಾಲೂಕಿನ ಮಸರಹಳ್ಳಿಯಲ್ಲಿ ರೈಲ್ವೆ ಹಳಿ ಮೇಲೆ ಫೋನ್‌ನಲ್ಲಿ ಮಗನೊಂದಿಗೆ ಮಾತನಾಡಿಕೊಂಡು ಹೊರಟಿದ್ದ ಮಹಿಳೆಗೆ ಬುಧವಾರ ಬೆಳಗ್ಗೆ ಶಿವಮೊಗ್ಗ-ಮೈಸೂರು ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದು ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭದ್ರಾವತಿ ತಾಲೂಕಿನ ಹನುಮಂತನಗರದ ಗೀತಾ (30) ಸಾವಿಗೀಡಾದ ಮಹಿಳೆ. ಗೀತಾ ಮಂಗಳವಾರ ರಾತ್ರಿಯೇ ಭದ್ರಾವತಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು. ಬೆಳಗ್ಗೆ ಎದ್ದು ಪುತ್ರನೊಂದಿಗೆ ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೊರಟಿದ್ದಾಗ ಶಿವಮೊಗ್ಗದಿಂದ ಮೈಸೂರಿಗೆ ತೆರಳುವ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಈ ವೇಳೆ ತಲೆಯ ಎಡಬದಿಗೆ ರೈಲು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ರೈಲ್ವೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುವಾಗ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಶಿವಮೊಗ್ಗ ರೈಲ್ವೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹವನ್ನು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here