ಹಾರಂಬಳ್ಳಿಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ಶಿಬಿರ | ಯುವ ಸಮೂಹ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ; ಪ್ರೊ. ಚಂದ್ರಶೇಖರ್

0
676

ರಿಪ್ಪನ್‌ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಬೆಳೆಯುತ್ತಿರುವ ಯುವಸಮೂಹ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಮಾನಸಿಕ ನೆಮ್ಮದಿ ಪಡೆದು ಕೊಳ್ಳುವುದರ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಅಂತಾಗುತ್ತದೆ ಎಂದು ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಚಂದ್ರಶೇಖರ್ ಹೇಳಿದರು.

ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ಹಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಒಂದು ವಾರದ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಜಾತಿ ಮತ ಪಂಥಗಳ ಬೇಧವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು ಸೇವೆಯನ್ನು ಮಾಡೋಣ ಎಂಬ ಸದುದ್ದೇಶದಿಂದ ಸ್ಥಾಪಿತವಾದ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಅದರಲ್ಲೂ ಯುವಸಮೂಹದಲ್ಲಿ ಸಮಾಜಸೇವೆಯ ಚಿಂತನೆಗಳನ್ನು ಮೂಡಿಸುತ್ತಿದೆ. ಯುವ ಸಮೂಹ ಸಮಾಜ ಸೇವೆಯಲ್ಲಿ ತೊಡಗಿಕೊಂಡರೆ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಹೆದ್ದಾರಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ ಗಂಗಾಧರ್ ಮಾತನಾಡಿ, ಸಮಾಜದ ನಿರ್ಮಾಣದಲ್ಲಿ ಮತ್ತು ದೇಶದ ಅಭಿವೃದ್ಧಿಯಲ್ಲಿ ಯುವ ಸಮೂಹದ ಪಾತ್ರ ಮಹತ್ತರವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಸಹ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಮಾಜ ಸೇವೆಯನ್ನು ಮಾಡುವ ಸದುದ್ದೇಶದಿಂದ ರಾಷ್ಟ್ರೀಯ ಸೇವಾ ಯೋಜನೆಯನ್ನು ಸರ್ಕಾರವು ಅನುಷ್ಠಾನಗೊಳಿಸಿದೆ. ಸಮಾಜ ಸೇವೆಯನ್ನು ಮಾಡುವ ಸದುದ್ದೇಶದಿಂದ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳು ಸಮಾಜ ಸೇವೆಯ ಜೊತೆಗೆ ಶೈಕ್ಷಣಿಕ ಚಟುವಟಿಕೆಗಳನ್ನು ಸಹ ತೊಡಗಿಕೊಂಡು ಉತ್ತಮ ಅಂಕ ಪಡೆದು ಉನ್ನತ ಉದ್ಯೋಗಗಳನ್ನು ಅಲಂಕರಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ಮಾತನಾಡಿ, ಇಂದಿನ ಸಮಾಜದಲ್ಲಿ ಯುವಸಮೂಹ ಅದರಲ್ಲೂ ವಿದ್ಯಾರ್ಥಿಗಳು ಮೊಬೈಲ್ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿಯನ್ನು ವಹಿಸುತ್ತಿದ್ದಾರೆ. ಇದು ಮುಂದಿನ ದಿನಗಳಲ್ಲಿ ಅವರ ಭವಿಷ್ಯಕ್ಕೆ ಮಾರಕವಾಗುವುದರಲ್ಲಿ ಸಂಶಯವಿಲ್ಲ. ಶಿಕ್ಷಣ ಪಡೆಯುವಂತಹ ಸರಿಯಾದ ಸಮಯದಲ್ಲಿ ಒಳ್ಳೆಯ ಶಿಕ್ಷಣವನ್ನು ಪಡೆದು ತಮ್ಮ ಪೋಷಕರುಗಳಿಗೆ ಹಾಗೂ ಕಲಿತ ಶಿಕ್ಷಣ ಸಂಸ್ಥೆಗಳಿಗೆ ಗೌರವವನ್ನು ತರುವುದರ ಜೊತೆಗೆ ಭವಿಷ್ಯವನ್ನು ರೂಪಿಸಿಕೊಂಡಾಗ ಮಾತ್ರ ಸಮಾಜವು ಗುರುತಿಸುತ್ತದೆ. ಸಮಾಜ ಸೇವೆಯನ್ನು ಮಾಡುವ ಸದುದ್ದೇಶ ಮತ್ತು ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ ಆದರೆ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ದೊರಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೆದ್ದಾರಿಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲೀಲಾವತಿ ಪುಂಡಲಿಕ ಶೆಟ್ಟಿ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ, ಹಾರಂಬಳ್ಳಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವಿಜೇಂದ್ರ ಹೆಚ್ ಪಿ, ಹೆದ್ದಾರಿಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಶೇಖರ್, ಕವಿತಾ ಭೀಮರಾಜ್, ಹಾರಂಬಳ್ಳಿ ಶಾಲೆಯ ಮುಖ್ಯ ಶಿಕ್ಷಕ ಮೋಹನ್ ಕುಮಾರ್ ಹೆಚ್. ಶಾಲಾಭಿವೃದ್ಧಿ ಸಮಿತಿಯ ರವೀಂದ್ರ, ಗಣಪತಿ ಇನ್ನಿತರರಿದ್ದರು.

ಕಾರ್ಯಕ್ರಮದಲ್ಲಿ ಕು|| ಅಂಕಿತ ರವರಿಂದ ಹರಿವಾಣ ತಟ್ಟೆ ನೃತ್ಯವನ್ನು ಏರ್ಪಡಿಸಲಾಗಿತ್ತು.

ಎನ್ಎಸ್ಎಸ್ ಘಟಕ ಅಧಿಕಾರಿ ಪ್ರೊ. ಶಿಲ್ಪಾ ಪಾಟೀಲ್ ಸ್ವಾಗತಿಸಿ, ಉಪನ್ಯಾಸಕ ಚಿರಂಜೀವಿ ಕಾರ್ಯಕ್ರಮವನ್ನು ನಿರೂಪಿಸಿ, ಎನ್ಎಸ್ಎಸ್ ಘಟಕದ ಸಂಯೋಜನಾ ಅಧಿಕಾರಿ ಪ್ರೊ. ದೇವರಾಜ್ ವಂದಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here