ಹಾರಂಬಳ್ಳಿ ಸರಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ | ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ ; ಶ್ರೀ ರೇಣುಕಾನಂದ ಸ್ವಾಮೀಜಿ

0
384

ರಿಪ್ಪನ್‌ಪೇಟೆ : ಮಾನವನ ಬದುಕಿನಲ್ಲಿ ಶಿಕ್ಷಣ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ ಎಂದು ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು.

ಹಾರಂಬಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಶ್ರೀ ನಾರಾಯಣ ಗುರುಗಳು ಶಿಕ್ಷಣ ಕಾಂತಿಯ ಮೂಲಕ ಸಮಾಜದಲ್ಲಿನ ಪ್ರತಿಯೊಬ್ಬರು ಒಳ್ಳೆಯ ಶಿಕ್ಷಣವನ್ನು ಪಡೆಯಬೇಕು ಎನ್ನುವ ಪರಿಕಲ್ಪನೆಯನ್ನು ಹೊಂದಿ ಅದನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾದರು.

ಶಿಕ್ಷಣವು ಮಾನವನ ಬದುಕಿನಲ್ಲಿ ಮಹತ್ವವಾದ ಪಾತ್ರವನ್ನು ವಹಿಸುತ್ತದೆ ಹಾಗೆಯೇ ಸಮಾಜದ ಅಭಿವೃದ್ಧಿಯಲ್ಲಿ ಸಹ ಅತ್ಯುನ್ನತವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು ತಮ್ಮ ಮಕ್ಕಳಿಗೆ ಸರಿಯಾದ ಸಮಯದಲ್ಲಿ ಸರಿಯಾದ ಶಿಕ್ಷಣವನ್ನು ಕೊಡಿಸಿ ಮಕ್ಕಳಿಗೆ ಶಿಕ್ಷಣದ ಬಗ್ಗೆ ಅಭಿರುಚಿಯನ್ನು ಬೆಳಸಬೇಕು. ಹಾಗೆಯೇ ಉತ್ತಮ ಸಂಸ್ಕಾರವನ್ನು ಕಲಿಸಿದರೆ ಮಾತ್ರ ಮಕ್ಕಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ಉತ್ತಮ ಅಂಕಗಳನ್ನು ಪಡೆದುಕೊಂಡು ಉನ್ನತ ಉದ್ಯೋಗವನ್ನು ಅಲಂಕರಿಸಿ ಸಮಾಜದ ಮುಖ್ಯವಾಹಿನಿಗೆ ಬರುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರಶಿಕ್ಷಣಾಧಿಕಾರಿ ವೀರಭದ್ರಪ್ಪ ಮಾತನಾಡಿ, ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಸರಕಾರಿ ಶಾಲೆಗಳಲ್ಲಿ ಪಾಠ-ಪ್ರವಚನಗಳನ್ನು ಮಾಡುವ ಬೋಧಕರು ಅತ್ಯುತ್ತಮವಾದ ಶಿಕ್ಷಣವನ್ನು ಪಡೆದಿದ್ದು ಹಾಗೆಯೇ ಸರಕಾರವೂ ಸಹ ನುರಿತ ಶಿಕ್ಷಣ ತಜ್ಞರಿಂದ ಉತ್ತಮ ತರಬೇತಿಗಳನ್ನು ಸಹ ನೀಡುತ್ತಿದ್ದು ಯಾವುದೇ ಖಾಸಗಿ ಶಿಕ್ಷಣ ಸಮಿತಿಗಳು ನೀಡದಂತಹ ಶಿಕ್ಷಣವನ್ನು ಈಗ ಸರ್ಕಾರಿ ಶಾಲೆಗಳು ನೀಡುತ್ತೇವೆ. ಸರಕಾರಿ ಶಾಲೆಗಳಲ್ಲೇ ಪಾಠಪ್ರವಚನಗಳ ಜೊತೆ ಹಾಲು, ಮಧ್ಯಾಹ್ನದ ಬಿಸಿ ಊಟ, ಸಮವಸ್ತ್ರ, ಪಾದರಕ್ಷೆ ಹಾಗೂ ಪಠ್ಯ ಪುಸ್ತಕಗಳನ್ನು ಉಚಿತವಾಗಿ ನೀಡುತ್ತಿವೆ ಇದರ ಪ್ರಯೋಜನವನ್ನು ಗ್ರಾಮೀಣ ಪ್ರದೇಶದ ಜನರು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿಜೇಂದ್ರ ಹಾರಂಬಳ್ಳಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಬಿ ಬೋಜಪ್ಪ, ಹೆದ್ದಾರಿಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಕವಿತಾ ಭೀಮರಾಜ್, ಮಳವಳ್ಳಿ ಚಂದ್ರಶೇಖರ, ಗಂಗಾಧರ್ ಸಿದ್ದೇಶ್, ರವಿ, ಮಧುರ ಇನ್ನಿತರರಿದ್ದರು.

ಮುಖ್ಯಶಿಕ್ಷಕ ಮೋಹನ್ ಕುಮಾರ್ ನಿರೂಪಿಸಿದರು. ಪ್ರೇಮ ಬಾಯಿ ಶಿಕ್ಷಕಿ ಸ್ವಾಗತಿಸಿದರು. ಗಣಪತಿ ವಂದಿಸಿದರು.

ವಾರ್ಷಿಕೋತ್ಸವ ಸಂಭ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳಿಂದ ವಿವಿಧ ಮನೋರಂಜನೆಯನ್ನು ಏರ್ಪಡಿಸಲಾಗಿತ್ತು.

ಜಾಹಿರಾತು

LEAVE A REPLY

Please enter your comment!
Please enter your name here