ಹಿಂದೂ ಅರ್ಚಕರ ನೇಮಕ ನ್ಯಾಯಾಲಯದ ಆದೇಶ ಸ್ವಾಗತ: ಡಿ.ಎನ್. ಜೀವರಾಜ್

0
402

ಚಿಕ್ಕಮಗಳೂರು : ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಹಿಂದೂ ಅರ್ಚಕರನ್ನು ನೇಮಿಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಮಾಜಿ ಸಚಿವ ಡಿ.ಎನ್. ಜೀವರಾಜ್ ಸ್ವಾಗತಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕಳೆದ ಮೂರು ದಶಕಗಳಿಂದ ಧರ್ಮದ ಪರವಾಗಿ ನಡೆಯುತ್ತಿದ್ದ ಹೋರಾಟಕ್ಕೆ ಸಂದ ಜಯ ಇದಾಗಿದೆ. ಇದೊಂದು ಸಂತೋಷ ಸಂಭ್ರಮದ ದಿನ ಎಂದು ಹೇಳಿದ್ದಾರೆ.

ದತ್ತಾತ್ರೇಯರ ಪಾದುಕೆಗಳ ಮತ್ತು ಅನುಸಾಯ ದೇವಿಗೆ ಹಿಂದೂ ಅರ್ಚಕರಿಂದ ಪೂಜೆ ನಡೆಯುತ್ತದೆ ಎನ್ನುವುದು ಹಿಂದೂಗಳ ಭಾವನೆ, ಧರ್ಮ ಹಾಗೂ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಇದನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.

ಇದೊಂದು ಮೊದಲ ಜಯ. ಪೀಠ ಪೂರ್ಣ ಪ್ರಮಾಣದಲ್ಲಿ ಹಿಂದೂಗಳ ಸುಪರ್ದಿಗೆ ಸಿಗುವವರೆಗೂ ಹೋರಾಟ ನಡೆಯುತ್ತದೆ. ಮುಂದಿನ ದಿನದಲ್ಲಿ ನ್ಯಾಯಾಲಯದಲ್ಲಿ ಈ ಬಗ್ಗೆಯೂ ಜಯ ಸಿಗುತ್ತದೆ ಎಂಬ ವಿಶ್ವಾಸ ಹೊರಹಾಕಿದ್ದಾರೆ.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎನ್. ರಾಮಸ್ವಾಮಿ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here