ಚಿಕ್ಕಮಗಳೂರು: ನಗರದ ಐ.ಡಿ.ಎಸ್.ಜಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದಾರೆ. ವಿದ್ಯಾರ್ಥಿನಿಯರು ರಾಜ್ಯ ಸರ್ಕಾರದ ಆದೇಶ ಧಿಕ್ಕರಿಸಿದ್ದಾರೆ. ಆದ್ರೆ ಇಲ್ಲಿ ಹಿಜಾಬ್ ಧರಿಸಿ ಬಂದರೂ ಕಾಲೇಜು ಆಡಳಿತ ಮಂಡಳಿ ಸುಮ್ಮನಿದೆ. ಹಾಗೂ ಸಮವಸ್ತ್ರ ಧರಿಸದೆ ಬಂದ ವಿದ್ಯಾರ್ಥಿಗಳಿಗೆ ಗೇಟ್ಪಾಸ್ ನೀಡಲಾಗುತ್ತಿದೆ. ಹೀಗಾಗಿ ಕಾಲೇಜಿನ ಧ್ವಂದ್ವ ನೀತಿಗೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದರ ಜೊತೆಗೆ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಬಳಿಕ ನೀಲಿ ಶಾಲು ಎಂಟ್ರಿ ಕೊಟ್ಟಿದ್ದು ಹಿಜಾಬ್ ತೆಗೆಸಬಾರದೆಂದು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಧರಣಿ ನಡೆಸುತ್ತಿದ್ದಾರೆ.

ಈ ವೇಳೆ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ ಇದ್ದರಿಂದ ಕೆಲ ಕಾಲ ಕಾಲೇಜಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
