ಶಿವಮೊಗ್ಗ: ಸಂವಿಧಾನಿಕ ಧಾರ್ಮಿಕ ಸ್ವಾತಂತ್ರ್ಯ ಧಮನಿಸುತ್ತಿರುವ ಕೋಮುವಾದಿ ಶಕ್ತಿಗಳ ವಿರುದ್ಧ ಹಾಗೂ ಹಿಜಾಬ್ ಧರಿಸಲು ಸರ್ಕಾರ ನಿಷೇಧಿಸಿರುವ ಆದೇಶವನ್ನು ಪುನರ್ ಪರಿಶೀಲಿಸುವಂತೆ ಆಗ್ರಹಿಸಿ ಶಿವಮೊಗ್ಗ ಮಹಿಳಾ ಒಕ್ಕೂಟದ ನೇತೃತ್ವದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಒಕ್ಕೂಟದ ಸದಸ್ಯರು ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆದು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ ಹಾಗೂ ಸಿಎಂಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸರ್ಕಾರವು ಮಾಡಿರುವಂತಹ ವಸ್ತ್ರ ಸಂಹಿತೆ ಆದೇಶದಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿ ಈ ಹಿಂದೆ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸಿಕೊಂಡು ಬರುತ್ತಿದ್ದಂತಹ ಹಿಜಾಬ್ ಹಾಗೂ ಬುರ್ಖಾವನ್ನು ಧರಿಸಿಕೊಂಡು ಬರಲು ತಾವುಗಳು ಅನುಮತಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯ ನೇತೃತ್ವವನ್ನು ಒಕ್ಕೂಟದ ಮುಖಂಡರಾದ ಎಹಸಸ್ ಎ ನಾಯಬ್, ಹೀನ ಕೌಸರ್, ಯಾಸ್ಮಿನ್, ಒಮ್ಮೆ ಸಲ್ಮಾ, ಸೋಫಿಯಾ, ಹಸೀನಾ, ಪೀಸ್ ಆರ್ಗನೈಜೆಷನ್ನ ಅಧ್ಯಕ್ಷ ರಿಯಾಜ್ ಅಹಮ್ಮದ್ ವಹಿಸಿದ್ದು, 500 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.