ಚಿಕ್ಕಮಗಳೂರು: ತಮ್ಮದೇ ಕೃಷ್ಣಗಿರಿ ಕಾಫಿ ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಹೆಜ್ಜೇನುಗಳು ನಡೆಸಿದ ದಾಳಿಗೆ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ ಎಸ್ ಭೋಜೇಗೌಡ ನಿಧನರಾಗಿದ್ದಾರೆ.
78 ಪ್ರಾಯದ ಭೋಜೇಗೌಡ ಜನತಾ ಪಕ್ಷದ ಮೂಲಕ ರಾಜಕೀಯ ಪ್ರವೇಶ ಮಾಡಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಕೇಂದ್ರದ ಮಾಜಿ ಸಚಿವೆ ಡಿ.ಕೆ. ತಾರದೇವಿ ಬಲಗೈ ಬಂಟರಾಗಿದ್ದರು. 2 ಬಾರಿ ಪಕ್ಷದ ಅಧ್ಯಕ್ಷರಾಗಿದ್ದರು. ಬಳಿಕ ಬಿಜೆಪಿಗೆ ಸೇರಿದ್ದು ಅಲ್ಲಿಯೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ಕಾಫಿ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕಾಫಿ ತೋಟದಲ್ಲಿ ಭಾರೀ ಸಂಖ್ಯೆಯಲ್ಲಿ ಹೆಜ್ಜೇನುಗಳು ದಾಳಿ ನಡೆಸಿದ್ದು ತಕ್ಷಣ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಭೋಜೇಗೌಡರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ವಿವಿಧ ಪಕ್ಷ ಸಂಘಟನೆಗಳ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿ ಅಂತಿಮ ದರ್ಶನ ಪಡೆದಿದ್ದಾರೆ.
Related