20.6 C
Shimoga
Friday, December 9, 2022

ಹೆದ್ದಾರಿಪುರ ; ಗ್ರಾಮ ಪಂಚಾಯಿತಿ ಸದಸ್ಯ ಚೂಡಾಮಣಿ ನಿಧನ

ರಿಪ್ಪನ್‌ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ಸದಸ್ಯ ಚೂಡಾಮಣಿ ಕಗ್ಗಲಿ (50) ಅನಾರೋಗ್ಯದಿಂದಾಗಿ ಅಕಾಲಿಕವಾಗಿ ನಿಧನ ಹೊಂದಿದ್ದಾರೆ.


ಹೆದ್ದಾರಿಪುರ ಗ್ರಾಮ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದರು.


ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.


ಗ್ರಾ.ಪಂ.ಸದಸ್ಯ ಚೂಡಾಮಣಿಯವರ ಅಕಾಲಿಕ ಅಗಲಿಕೆಯಿಂದಾಗಿ ಬಿಜೆಪಿ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಸುಧೀಂದ್ರ ಪೂಜಾರಿ, ತಿಮ್ಮಪ್ಪ ಬೆಳ್ಳೂರು, ಉಮೇಶ್ ಜಾಗದ್ದೆ, ಕಲ್ಲೂರು ನಾಗೇಂದ್ರ ಇನ್ನಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!