ಹೊಂಬುಜ; ಜಗನ್ಮಾತೆ ದರ್ಶನ ಪಡೆದ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ

0
340

ರಿಪ್ಪನ್‌ಪೇಟೆ: ಜೈನದ ದಕ್ಷಿಣ ಕಾಶಿ ಹೊಂಬುಜ ಅತಿಶಯ ಮಹಾಕ್ಷೇತ್ರ ಹೊಂಬುಜಕ್ಕೆ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಶನಿವಾರದಂದು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದರ್ಶನಾರ್ಶೀವಾದ ಪಡೆದರು.

ನಂತರ ಧರ್ಮಧಿಕಾರಿಗಳು ಶ್ರೀ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳ ಕುರಿತು ಶ್ರೀಗಳೊಂದಿಗೆ ಅತಿಶಯ ಶ್ರೀಕ್ಷೇತ್ರ ಹೊಂಬುಜದ ಅಧಿದೇವತೆ ಭಗವಾನ್ ಶ್ರೀ ಪಾರ್ಶ್ವನಾಥ ತೀರ್ಥಂಕರರ ಯಕ್ಷಿಶ್ರೀ ಜಗನ್ಮಾತೆ ಪದ್ಮಾವತಿ ಅಮ್ಮನವರ ಬಸದಿಯ ಜೀರ್ಣೋದ್ಧಾರ ಕಾರ್ಯವನ್ನು ವೀಕ್ಷಿಸಿ ಪೂಜ್ಯಶ್ರೀಗಳೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭ ಹೆಗ್ಗಡೆಯವರನ್ನು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಸನ್ಮಾನಿಸಿ ಆಶೀರ್ವದಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here