ಹೊಂಬುಜ: ಶರನ್ನವರಾತ್ರಿ ಮಹೋತ್ಸವಕ್ಕೆ ಪಾರಂಪರಿಕ ಚಾಲನೆ

0
310

ರಿಪ್ಪನ್‌ಪೇಟೆ: ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ್ ಶ್ರೀ‌ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಪರಂಪರಾನುಗತವಾಗಿ ಶರನ್ನವರಾತ್ರಿ ಮಹೋತ್ಸವಕ್ಕೆ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಘಟಸ್ಥಾಪನೆಯ ಮೂಲಕ ಚಾಲನೆ ನೀಡಿದರು.

ಊರ ಹಾಗೂ ಪರಊರಿನಿಂದ ಆಗಮಿಸಿದ್ದ ಭಕ್ತವೃಂದದವರು ಪೂಜಾ ಮಹೋತ್ಸವಗಳಲ್ಲಿ ಪಾಲ್ಗೊಂಡಿದ್ದರು.

ಪೂಜ್ಯ ಶ್ರೀಗಳವರು ಭ|| ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರಲ್ಲಿ ಪ್ರಾರ್ಥನೆ ಸಲ್ಲಿಸಿ ಎಲ್ಲರ ಸನ್ಮಂಗಲಕ್ಕಾಗಿ ಆರಿಕೆ ಮಾಡಿಕೊಂಡಿರುವುದಾಗಿ ತಿಳಿಸಿದರು.

ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಪ್ರತಿದಿನ ಧಾರ್ಮಿಕ ವಿಧಿ-ವಿಧಾನ ಪೂಜಾ ಮಹೋತ್ಸವಗಳು ನೆರವೇರಲಿವೆ.

ಅ. 10 ಭಾನುವಾರ ಸರಸ್ವತಿ ಪೂಜೆ, ಅ. 13 ಬುಧವಾರ-ಜೀವದಯಾಷ್ಟಮಿ, ಅ. 14 ಗುರುವಾರ-ಆಯುಧಪೂಜೆ, ಅ. 15 ಶುಕ್ರವಾರ ವಿಜಯದಶಮಿ ಉತ್ಸವ, ಶ್ರೀದೇವಿ ಪಲ್ಲಕ್ಕಿ ಉತ್ಸವ, ಪರಮಪೂಜ್ಯ ಸ್ವಸ್ತಿಶ್ರೀಗಳವರ ಸಿಂಹಾಸನಾರೋಹಣ ಹಾಗೂ ಶ್ರೀಗಳವರ ಪಾದಪೂಜೆ ಕಾರ್ಯಕ್ರಮಗಳು ನೆರವೇರಲಿದೆ.

ಜಾಹಿರಾತು

LEAVE A REPLY

Please enter your comment!
Please enter your name here