24.3 C
Shimoga
Friday, December 9, 2022

ಹೊಸನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಮಾವೇಶ | ಅವರ ಸೇವೆಗೆ ತಕ್ಕ ಪ್ರತಿಫಲ ಕೊಡಿಸಲು ಶ್ರಮಿಸುವೆ ; ಶಾಸಕ ಹರತಾಳು ಹಾಲಪ್ಪ

ಹೊಸನಗರ : ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರಿಗೆ ಅವರ ಸೇವೆಗೆ ತಕ್ಕ ಪ್ರತಿಫಲ ಕೊಡಿಸಲು ಶ್ರಮಿಸುವೆ  ಎಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಶಾಸಕ ಹರತಾಳು ಹಾಲಪ್ಪ ಹೇಳಿದರು.

ಪಟ್ಟಣದ ಸೀತಾರಾಮಚಂದ್ರ ಸಭಾಭವನದಲ್ಲಿ ಇಂದು ನಡೆದ ತಾಲೂಕು ಅಂಗನವಾಡಿ ಕಾರ್ಯಕರ್ತರ ಹಾಗೂ ಸಹಾಯಕಿಯರ ಸಮಾವೇಶದಲ್ಲಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಸೇವೆ ಅವಿಸ್ಮರಣೀಯವಾದದ್ದು ಮಹಾಮಾರಿ ಕೊರೊನಾ ಕಾರ್ಯದಲ್ಲಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ಎಸಗಿದ್ದಾರೆ. ಆದರೂ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಿಲ್ಲದಿರುವುದರ ಬಗ್ಗೆ ವಿಷಾದ ವ್ಯಕ್ತಪಡಿಸಿ, ಈ ಬಗ್ಗೆ ವಿಧಾನಸಭೆಯಲ್ಲಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದರು

ತಾಲೂಕು ಪಂಚಾಯತ್ ಮಾಜಿ ಸದಸ್ಯ ಎರಗಿ ಉಮೇಶ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತರ ಸೇವೆಗೆ ಸೇವಾ ಭದ್ರತೆ ಇಲ್ಲದಿರುವುದು ತೀರಾ ಖಂಡನಾರ್ಹ ಎಂದರು‌.

ರಾಜ್ಯ ಐಟೆಕ್ ಪ್ರಧಾನ ಕಾರ್ಯದರ್ಶಿ ಕಾಮ್ರೆಡ್ ಎಂ ಜಯಮ್ಮ ಮಾತನಾಡಿ, ಮಹಿಳಾ ಮತ್ತು ಶಿಷ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಗರ್ಭಿಣಿ ಹಾಗೂ ಬಾಣಂತಿಯರ ಆರೈಕೆ ಪೂರಕ ಪೋಷಿಕ ಆಹಾರ ಶಾಲಾ ಪೂರ್ವ ಶಿಕ್ಷಣ ಲಾಲನೆ ಪಾಲನೆ ಮಾಡುವ ಅಂಗನವಾಡಿ ಕಾರ್ಯಕರ್ತರ ಹಾಗೂ ಸಹಾಯಕರಿಗೆ ನೀಡುವ ಗೌರವ ಧನ ಕನಿಷ್ಠ ಮಟ್ಟದ್ದಾಗಿರುವ ಕಾರಣ ರಾಜ್ಯದಲ್ಲಿರುವ 1.3 ಲಕ್ಷದಷ್ಟು ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರಿಗೆ ಕನಿಷ್ಠ ವೇತನ ನಿಗದಿ ಪಡಿಸುವಂತೆ ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್ಲಾ ಕೇಂದ್ರಗಳಿಗೂ ಸಹಾಯಕರನ್ನು ನೇಮಿಸಬೇಕು. ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ಪಠ್ಯಪುಸ್ತಕ ಸೌಲಭ್ಯ ಒದಗಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರನ್ನು ಖಾಯಂಗೊಳಿಸಬೇಕು. ಪೋಷನ್ ಟ್ರಾಕ್ ನ ಭಾಗವಾಗಿ ಕೊಟ್ಟಿರುವ ಕಳಪೆ ಮೊಬೈಲ್ ವಾಪಸ್ ಪಡೆದು ಟ್ಯಾಬ್ ನೀಡಬೇಕು. ಬಡ ಕಾರ್ಯಕರ್ತರು ಹಾಗೂ ಸಹಾಯಕರಿಗೆ ವಸತಿ ಸೌಲಭ್ಯ ಒದಗಿಸಬೇಕು. ಆರೋಗ್ಯ ವಿಮೆ ಜಾರಿಗೊಳಿಸಬೇಕು ಕಾರ್ಯಕರ್ತರು ಅಥವಾ ಸಹಾಯಕಿಯರು ಸೇವೆಯಲ್ಲಿರುವಾಗ ಮರಣ ಹೊಂದಿದರೆ ಅಥವಾ ಅಪಘಾತದಿಂದ ಬಳಲುತ್ತಿದ್ದರೆ ಅವರು ಕುಟುಂಬದವರಿಗೆ ಅಥವಾ ಅವರ ಸಂಬಂಧಿಕರಿಗೆ ಉದ್ಯೋಗ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಪಡಿಸಿದರು.

ತಾರಾ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಮರಿಯಪ್ಪ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಶಿರೇಖಾ, ಜಿಲ್ಲಾ ಸಂಚಾಲಕ ರವೀಂದ್ರ ಸಾಗರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಶಾರದಾ ಸ್ವಾಗತಿಸಿದರು. ಆರ್ ರೇಖಾ, ಕೆ ಎಸ್ ಉಷಾ ಕಾರ್ಯಕ್ರಮ ನಿರೂಪಿಸಿದರು. ಸತ್ಯ ನಾಗರತ್ನ ಅಭಾರ ಮನ್ನಿಸಿದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!