ಹೊಸನಗರದಲ್ಲಿ ಆರೋಗ್ಯ ಕಾರ್ಯಕರ್ತರಿಂದ ಡೆಂಗ್ಯೂ ದಿನಾಚರಣೆ

0
126

ಹೊಸನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಆಸ್ಪತ್ರೆ ಹೊಸನಗರ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಆರೋಗ್ಯ ಕಾರ್ಯಕರ್ತರು ಸೋಮವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಡೆಂಗ್ಯೂ ದಿನಾಚರಣೆ ಅಂಗವಾಗಿ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಮಾಹಿತಿ ನೀಡಿದರು.

ಪಟ್ಟಣ ಪಂಚಾಯತಿ ಅಧ್ಯಕ್ಷೆ ಗುಲಾಬಿ ಮರಿಯಪ್ಪ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಆರೋಗ್ಯ ರಕ್ಷಣೆಯಲ್ಲಿ ಎಲ್ಲರೂ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಆರೋಗ್ಯಕರ ವಾತಾವರಣ ನಿರ್ಮಿಸಬೇಕೆಂದರು‌.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಾಂತರಾಜು ಮಾತನಾಡಿ, ತೀವ್ರ ಜ್ವರ ವಿಪರೀತ ತಲೆನೋವು ಕಣ್ಣುಗಳ ಹಿಂಭಾಗದಲ್ಲಿ ನೋವು ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಈ ರೋಗದ ಪ್ರಮುಖ ಲಕ್ಷಣಗಳಾಗಿವೆ. ತೀವ್ರತರ ಹಾಗೂ ಒಂದೇ ಸಮನೆ ಉಂಟಾಗುವ ಹೊಟ್ಟೆ ನೋವು ಬಾಯಿ, ಮೂಗು, ಒಸಡುಗಳಿಂದ ರಕ್ತಸ್ರಾವ ಬಾಯಾರಿಕೆ ಡೆಂಗ್ಯೂ ರೋಗದ ಲಕ್ಷಣಗಳಾಗಿದೆ.

ಈ ರೋಗದ ಚಿಕಿತ್ಸೆಗೆ ನಿರ್ದಿಷ್ಟವಾದ ಔಷಧಿ ಇಲ್ಲದ ಕಾರಣ ನಮ್ಮ ಪರಿಸರವನ್ನು ಹೆಚ್ಚಾಗಿ ಶುಚಿಯಿಂದ ಕಾಪಾಡುವುದರ ಮೂಲಕ ಸೊಳ್ಳೆಗಳು ಉತ್ಪತ್ತಿಯಾಗುವುದನ್ನು ತಡೆಗಟ್ಟಬೇಕು. ಡೆಂಗ್ಯೂ ಜ್ವರವು ಮಕ್ಕಳ ಹಾಗೂ ದೊಡ್ಡವರಿಗೂ ಹರಡುವುದರಿಂದ ನಿಂತ ನೀರು ಸೊಳ್ಳೆಗಳ ಉತ್ಪತ್ತಿಯ ತವರಾಗಿದೆ. ಸುತ್ತಮುತ್ತಲ ನೀರು ನಿಲ್ಲದಂತೆ ಎಚ್ಚರವಹಿಸಬೇಕೆಂದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಸುರೇಶ್ ಜಿಲ್ಲಾ ಆರೋಗ್ಯ ಮೇಲ್ವಿಚಾರಕ ವೆಂಕಟಕೃಷ್ಣಯ್ಯ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ, ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ರಮೇಶ್ ಆಚಾರ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಲಿಖಿತರಾಜ್, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here