ಹೊಸನಗರದಲ್ಲಿ ಡಿ. 18ರಂದು ಲೋಕ್ ಅದಾಲತ್ ಶಿಬಿರ: ರವಿಕುಮಾರ್ ಕೆ‌.

0
246

ಹೊಸನಗರ : ಸಮಾಜದಲ್ಲಿ ತುಳಿತಕ್ಕೆ ಒಳಗಾಗಿರುವ ಅಂಚಿಗೆ ತಳ್ಳಲ್ಪಟ್ಟ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ರಕ್ಷಣೆ ಖಾತರಿಪಡಿಸುವುದು ಅಗತ್ಯವಿದೆ. ಮಹಿಳೆಯರು ಮತ್ತು ಮಕ್ಕಳು ಸಮಾಜದ ದುರ್ಬಲ ವರ್ಗದ ಸಮುದಾಯದವರಿಗೂ ಸೇರಿದಂತೆ ಎಲ್ಲರಿಗೂ ಕಾನೂನು ನೆರವು ಖಚಿತಪಡಿಸಿಕೊಳ್ಳಲು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಬದ್ಧವಾಗಿದೆ.

ಈ ನಿಟ್ಟಿನಲ್ಲಿ ಡಿಸೆಂಬರ್ 18 ರ ಶನಿವಾರ ಹೊಸನಗರದ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಏರ್ಪಡಿಸಿರುವುದಾಗಿ ಜೆ.ಎಂ.ಎಫ್.ಸಿ ನ್ಯಾಯಾಲಯದ ವ್ಯವಹಾರ ನ್ಯಾಯಾಧೀಶ ರವಿಕುಮಾರ್ ಕೆ‌. ತಿಳಿಸಿದ್ದು, ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದ್ದು ಇದರ ಸದುಪಯೋಗ ಪಡೆಯುವಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ‌‌.

ಸಂವಿಧಾನದ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ಉಚಿತ ಕಾನೂನು ನೆರವು ನೀಡಲು ಅಧಿಕಾರ ಸಿದ್ಧವಿದೆ. ಈ ಕಾನೂನು ನೆರವಿನ ಸೌಲಭ್ಯವನ್ನು ಪಡೆಯುವಂತೆ ಅವರು ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here