ಹೊಸನಗರದಲ್ಲಿ ನಾಳೆ ತಾಲೂಕು ಮಟ್ಟದ ‘ಪಂಚಾಯತ್ ಕ್ರೀಡಾಹಬ್ಬ – 2022’

0
740

ಹೊಸನಗರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್‌ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಒಲಂಪಿಕ್ ಅಸೋಸಿಯೇಶನ್, ತಾಲ್ಲೂಕು ಪಂಚಾಯಿತಿ ಹೊಸನಗರ ಹಾಗೂ ಹೊಸನಗರದ 30ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಹೊಸನಗರದ ನೆಹರು ಮೈದಾನದಲ್ಲಿ ಇದೇ ಶನಿವಾರ ಬೆಳಿಗ್ಗೆ 10ಗಂಟೆಗೆ ಏರ್ಪಡಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಸಿ. ಯವರು ತಿಳಿಸಿದ್ದಾರೆ.

ನೆಹರು ಕ್ರೀಡಾಂಗಣದ ಆವರಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಶನಿವಾರ 10ಗಂಟೆಗೆ ರೇಷ್ಮೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ನಾರಾಯಣಗೌಡರವರ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರು ವಹಿಸಲಿದ್ದು ಕ್ರೀಡಾ ಜ್ಯೋತಿ ಸ್ವೀಕಾರವನ್ನು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಆರುಣ್‌ರವರು ಸ್ವೀಕರಿಸಲಿದ್ದು ಸಂಸದ ಬಿ.ವೈ ರಾಘವೇಂದ್ರ ಹಾಗೂ ಇನ್ನೂ ಅನೇಕ ಗಣ್ಯರು ಆಗಮಿಸಲಿದ್ದಾರೆ ಎಂದರು.

ಹೊಸನಗರ ತಾಲ್ಲೂಕಿನ ತಹಶೀಲ್ದಾರ್ ವಿ.ಎಸ್ ರಾಜೀವ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ವಿವಿಧ ಇಲಾಖೆಯ ಅಧಿಕಾರಿಗಳು ಕಾಲೇಜಿನ ಪ್ರಾಂಶುಪಾಲರುಗಳು, ಶಿಕ್ಷಕ ವೃಂದ ಹಾಗೂ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರ ಜೊತೆಗೆ 30 ಗ್ರಾಮ ಪಂಚಾಯಿತಿಯ ಪಿಡಿಓಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದು 30 ಗ್ರಾಮ ಪಂಚಾಯಿತಿಯ ಸದಸ್ಯರುಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ಸುಮಾರು 600ಜನ ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ನಿರೀಕ್ಷೆಯಲ್ಲಿದ್ದು ಇವರೆಲ್ಲರಿಗೂ ಬೆಳಗ್ಗೆ ಲಘು ಉಪಹಾರ, ಮಧ್ಯಾಹ್ನ 12ಗಂಟೆಗೆ ತಂಪುಪಾನಿಯ, ನಂತರ ಊಟದ ವ್ಯವಸ್ಥೆ, ಸಂಜೆ ಟೀ, ಕಾಫಿಯ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ಆಟೋಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ಕೇಳಿಕೊಂಡರು.

ಜಾಹಿರಾತು

LEAVE A REPLY

Please enter your comment!
Please enter your name here