ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ

0
771

ಹೊಸನಗರ: ಯುವ ಸಮೂಹವು ರಾಷ್ಟ್ರೀಯ ಐಕ್ಯತೆಯನ್ನು ಬಲಗೊಳಿಸುವತ್ತ ಸಾಗಬೇಕು ಎಂದು ಕಾಲೇಜಿನ ಪ್ರಿನ್ಸಿಪಾಲರಾದ ಜಯಪ್ಪ.ಸಿ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಸಾಂಸ್ಕೃತಿಕ ವೇದಿಕೆ ಮತ್ತು ಐ.ಕ್ಯು.ಎ.ಸಿ ಸಹಯೋಗದೊಂದಿಗೆ ಆಯೋಜಿಸಿದ ರಾಷ್ಟ್ರೀಯ ಐಕ್ಯತಾ ಸಪ್ತಾಹಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಲ್ಲಿ ಐಕ್ಯತೆ ಮೂಡಿದರೆ ದೇಶದ ಐಕ್ಯತೆ ಸಾಧ್ಯವಾಗುವುದರೊಂದಿಗೆ ಸಪ್ತಾಹದ ಉದ್ದೇಶ ಸಫಲವಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇತಿಹಾಸ ವಿಭಾಗದ ಮುಖ್ಯಸ್ಥರಾದ ಶದಿವಾಕರ ಎಚ್ ಅವರು ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ನಾಡು ನಮ್ಮದಾಗಿದ್ದು ನಾವೆಲ್ಲ ಒಂದೇ ಎಂಬ ಮನೋಭಾವ ಮೂಡಿದರೆ ಐಕ್ಯತೆ ಸಾಧ್ಯವೆಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಡಾ. ಸೌಮ್ಯ.ಕೆ.ಸಿ ರಾಷ್ಟ್ರೀಯ ಐಕ್ಯತಾ ಸಪ್ತಾಹದಲ್ಲಿನ ವಿವಿಧ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸ್ಪಷ್ಟಪಡಿಸಿದರು.

ಸಹಾಯಕ ಪ್ರಾಧ್ಯಾಪಕರಾದ ಪ್ರತಿಮಾ, ರವಿ.ಸಿ.ಎಚ್ ಕಾರ್ಯಕ್ರಮದಲ್ಲಿ ಹಾಜರಿದ್ದು ವಿದ್ಯಾರ್ಥಿಗಳನುದ್ದೇಶಿಸಿ ಮಾತನಾಡಿದರು.

ಕುಮಾರಿ ಧನ್ಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಆಶ್ವಿತಾ ನಿರೂಪಿಸಿ, ವಿನೀತಾ ಪ್ರಾರ್ಥಿಸಿ, ರಶ್ಮಿತಾ ವಂದಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here