ಹೊಸನಗರ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ

0
135

ಹೊಸನಗರ: 14 ವರ್ಷದೊಳಗಿನ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಇಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ ಚಾಲನೆ ನೀಡಿದರು.

ಕಳೆದೆರಡು ವರ್ಷಗಳ ಮಹಾಮಾರಿ ಕರೋನ ಹಿನ್ನೆಲೆಯಲ್ಲಿ ಶಿಕ್ಷಣದ ವ್ಯವಸ್ಥೆಯಲ್ಲಿ ಏರುಪೇರು ಉಂಟಾಗಿದೆ ಪ್ರಸ್ತುತ ಶಿಕ್ಷಣದೊಂದಿಗೆ ಹಾಸು ಹೊಕ್ಕಾಗಿರುವ ಕ್ರೀಡೆಗೂ ಸಹ ವರುಣನ ಅವಕೃಪೆ ಎದುರಾಗಿದ್ದರು ಎಲ್ಲ ಕಡೆ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಗಳು ಯಶಸ್ವಿಯಾಗಿ ನಡೆಯಿತು. ಈಗ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಮಳೆಯ ಛಾಯೆ ಎದ್ದು ಕಾಣುತ್ತದೆ. ಸ್ಪರ್ಧೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಎಂದು ಮಕ್ಕಳಿಗೆ ಹುರುಪು ತುಂಬಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಳುಗುಡ್ಡೆ ಗ್ರಾಮ ಪಂಚಾಯತಿ ಜೇನಿ ಸಮಿತಿ ಆಶ್ರಯದಲ್ಲಿ ಏರ್ಪಡಿಸಿದ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಎನ್ ಹರೀಶ್ ವಹಿಸಿದ್ದು, ಸಮಾರಂಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಗುಲಾಬಿ ಮರಿಯಪ್ಪ, ಉಪಾಧ್ಯಕ್ಷೆ ಕೃಷ್ಣವೇಣಿ ಸಮನ್ವಯಾಧಿಕಾರಿ ಎಂ ರಂಗನಾಥ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಸ್ ಪಿ ನಾಗರಾಜ್, ದೈಹಿಕ ಶಿಕ್ಷಣ ಪರಿವೀಕ್ಷಕ ಕೆ ಬಾಲಚಂದ್ರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್ ಆರ್ ಸುರೇಶ್, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಲ್ತಾಫ್, ಬಸವಣ್ಣಪ್ಪ, ಕುಬೇಂದ್ರಪ್ಪ, ರಮೇಶ, ರಾಜುಶೆಟ್ಟಿ, ಗಂಗಾ ನಾಯಕ್, ಗಣಪತಿ, ಜಗದೀಶ್ ಕಾಗಿನೆಲ್ಲಿ ಕೆ ಜಿ ಪುಟ್ಟಸ್ವಾಮಿ, ವನಜಾ, ಜಯಲಕ್ಷ್ಮಿ ಮೊದಲಾದವರು ಉಪಸ್ಥಿತರಿದ್ದರು.

500ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದ ಕ್ರೀಡಾಕೂಟದಲ್ಲಿ ಗಂಗಾಧರಯ್ಯ ಸ್ವಾಗತಿಸಿ, ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here