ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ ತಡೆ ಹಿಡಿಯಲು ಅಧಿಕಾರಿಗಳಿಗೆ ತಹಶೀಲ್ದಾರ್ ವಿ.ಎಸ್ ರಾಜೀವ್ ಖಡಕ್ ಸೂಚನೆ

0
1366

ಹೊಸನಗರ: ತಾಲ್ಲೂಕಿನಲ್ಲಿ ಹಗಲು-ರಾತ್ರಿ ಎನ್ನದೇ ಅಕ್ರಮ ಮರಳು, ಕಲ್ಲುಗಳು ಸಾಗಾಟ ನಡೆಯುತ್ತಿದೆ ಎಂದು ಸಾರ್ವಜನಿಕರು ಹಾಗೂ ಮಾಧ್ಯಮಗಳು ನಮ್ಮ ಗಮನಕ್ಕೆ ತಂದಿದ್ದು ಇದನ್ನು ಕಡಿವಾಣ ಹಾಕುವ ಸಲುವಾಗಿ ಹೊಸನಗರ ತಾಲ್ಲೂಕಿನ ಕೆಲವು ಅಧಿಕಾರಿಗಳಿಗೆ ಅಕ್ರಮವಾಗಿ ತುಂಬಿದ ಟಿಪ್ಪರ್ ಲಾರಿ, 407 ವಾಹನಗಳನ್ನು ಹಿಡಿದು ಕೇಸು ದಾಖಲಿಸಲು ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಾಲ್ಲೂಕಿನ ಅಧಿಕಾರಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

ಈ ಬಗ್ಗೆ ತಾಲೂಕು ಕಚೇರಿಯ ಆವರಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ನಮ್ಮ ಅಧಿಕಾರಿಗಳ ಬಗ್ಗೆ ಲಂಚ ಪಡೆದು ಲಾರಿ ಟಿಪ್ಪರ್, 407 ವಾಹನಗಳನ್ನು ಬಿಡುತ್ತಿದ್ದಾರೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ ಅಕ್ರಮ ಮರಳುಗಾರಿಕೆಯಲ್ಲಿ ಅಧಿಕಾರಿಗಳ ಪಾತ್ರವೇನು ಇಲ್ಲ ಇನ್ನೂ ಮುಂದೆ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ತಾಲ್ಲೂಕು ಪಂಚಾಯಿತಿ ಹಾಗೂ ಹೊಸನಗರ ತಾಲ್ಲೂಕಿಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಓಗಳು ಅಕ್ರಮವಾಗಿ ಮರಳುಗಾರಿಕೆಯ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ತಕ್ಷಣ ಹೊಸನಗರ ತಾಲ್ಲೂಕಿನ ಎಲ್ಲ ಸರ್ಕಾರಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಅಕ್ರಮವಾಗಿ ಸಾಗಾಟ ನಡೆಸುತ್ತಿರುವ ವಾಹನಗಳು ಹಾಗೂ ಹೊಳೆಯಲ್ಲಿ ಶೇಖರಣೆ ಮಾಡಿರುವ ಅಕ್ರಮ ಮರಳನ್ನು ಸರ್ಕಾರದ ವಶಕ್ಕೆ ಪಡೆಯಿರಿ ಎಂದು ಈಗಾಗಲೇ ನೋಟಿಸ್ ಮೂಲಕ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ಅಕ್ರಮ ಮರಳುಗಾರಿಕೆ ಬಗ್ಗೆ ಈ ಹಿಂದಿನಿಂದಲೂ ‘ಮಲ್ನಾಡ್ ಟೈಮ್ಸ್’ ನಿರಂತರವಾಗಿ ವರದಿ ಮಾಡುತ್ತಾ ಬಂದಿದ್ದು ಈ ಬಗ್ಗೆ ಕೊನೆಗೂ ಎಚ್ಚೆತ್ತುಕೊಂಡ ತಾಲೂಕು ದಂಡಾಧಿಕಾರಿಗಳು ಮತ್ತು ತಹಶೀಲ್ದಾರ್ ವಿ.ಎಸ್ ರಾಜೀವ್ ರವರ ಈ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದೆ.

ಜಾಹಿರಾತು

LEAVE A REPLY

Please enter your comment!
Please enter your name here