ಹೊಸನಗರ ತಾಲ್ಲೂಕಿನ ಅರಣ್ಯ ಹಕ್ಕು ಸಮಿತಿಗಳು ಕೂಡಲೇ ಕಾರ್ಯಪ್ರವೃತ್ತಿಯಾಗಬೇಕು: ಉಪವಿಭಾಗಾಧಿಕಾರಿ ಡಾ|| ನಾಗರಾಜ್

0
580

ಹೊಸನಗರ: ತಾಲ್ಲೂಕಿನ ಗ್ರಾಮ ಪಂಚಾಯಿತಿ ಮಟ್ಟದ ಅರಣ್ಯ ಹಕ್ಕು ಸಮಿತಿಗಳು ತಟಸ್ಥ ವ್ಯವಸ್ಥೆಯಲ್ಲಿದ್ದು ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಸದಸ್ಯರು ತಕ್ಷಣ ಕಾರ್ಯಪ್ರವೃತ್ತರಾಗಬೇಕು ತಮ್ಮ ಗ್ರಾಮ ಪಂಚಾಯಿತಿಗೆ ಅರಣ್ಯ ಹಕ್ಕು ಸಮಿತಿಗೆ ಬಂದ ಅರ್ಜಿಗಳನ್ನು ಶೀಘ್ರ ಬಗೆಹರಿಸಬೇಕೆಂದು ಸಾಗರ ಉಪವಿಭಾಗಾಧಿಕಾರಿ ಡಾ|| ನಾಗರಾಜ್‌ರವರು ಹೇಳಿದರು.

ಹೊಸನಗರದ ತಾಲ್ಲೂಕು ಕಛೇರಿಯ ಆವರಣದಲ್ಲಿ ಅರಣ್ಯ ಹಕ್ಕು ಸಮಿತಿಯ ಸಭೆಯನ್ನು ಏರ್ಪಡಿಸಲಾಗಿದ್ದು ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸಭೆಯಲ್ಲಿ ತಾಲ್ಲೂಕು ತಹಶೀಲ್ದಾರ್ ರಾಜೀವ್, ಅರಣ್ಯ ಸಂರಕ್ಷಣಾಧಿಕಾರಿ ಶಿವಮೂರ್ತಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಚಂದ್ರಮೌಳಿಗೌಡ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಸಮಾಜ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಗುಮಾಸ್ಥರಾದ ನಾಗಭೂಷಣ, ರಾಘವೇಂದ್ರ, ತಾಲ್ಲೂಕ್ ಕಛೇರಿಯ ಶಿರಾಸ್ಥೆದಾರ್ ಶ್ರೀಕಾಂತ್ ಹೆಗ್ಡೆ, ಸುಧೀಂದ್ರ ಕುಮಾರ್, ಪ್ರಥಮ ದರ್ಜೆ ಗುಮಾಸ್ಥರಾದ ವಿನಯ್ ಎಂ ಆರಾಧ್ಯ, ಗ್ರಾಮ ಲೆಕ್ಕಾಧಿಕಾರಿ ರೇಣುಕಯ್ಯ, ಇನ್ನೂ ಮುಂತಾದವರು ಉಪಸ್ಥಿತರಿದ್ದು ಅರಣ್ಯ ಹಕ್ಕು ಸಮಿತಿಯ ಬಗ್ಗೆ ಮಾಹಿತಿ ನೀಡಿದರು.

ಈ ಸಭೆಯಲ್ಲಿ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಲಾಯಿತ್ತು ಹಾಗೂ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸೂಕ್ತ ದಾಖಲೆಗಳನ್ನು ಒದಗಿಸುವಂತೆ ನಿರ್ದೆಶಿಸಲಾಯಿತ್ತು.

ಜಾಹಿರಾತು

LEAVE A REPLY

Please enter your comment!
Please enter your name here