ಹೊಸನಗರ ತಾಲ್ಲೂಕಿನ ಪ್ರತಿಯೊಂದು ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಟ ; ತಹಶೀಲ್ದಾರ್ ವಿ.ಎಸ್ ರಾಜೀವ್

0
603

ಹೊಸನಗರ: ಭಾರತ ಸ್ವಾತಂತ್ಯೋತ್ಸವ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಹೊಸನಗರ ತಾಲ್ಲೂಕಿನ ಪ್ರತಿಯೊಂದು ಮನೆಯಲ್ಲಿಯೂ ಆಗಸ್ಟ್13ರಿಂದ 15ರವರೆಗೆ ತ್ರಿವರ್ಣ ಧ್ವಜ ಹಾರಾಟ ಮಾಡಲಿದೆ ಎಂದು ವಿ.ಎಸ್ ತಹಶೀಲ್ದಾರ್ ರಾಜೀವ್‌ರವರು ಹೇಳಿದರು.

ಅವರು ತಾಲ್ಲೂಕು ಕಛೇರಿಯ ಆವರಣದಲ್ಲಿ ಹರ್ ಘರ್ ತಿರಂಗಾ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.

ಹೊಸನಗರ ತಾಲ್ಲೂಕಿನಲ್ಲಿ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರ ಪ್ರೇಮ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತ ದಾಖಲಿಸುವಂತೆ ಕೇಂದ್ರ ಸರ್ಕಾರ ಕರೆ ನೀಡಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಸ್ತಳೀಯ ಭಾಷೆಯಲ್ಲಿ ಕರಪತ್ರ ಬ್ಯಾನರ್ ಇತ್ಯಾದಿಗಳ ಮೂಲಕ ಪ್ರಮುಖ ಸ್ತಳಗಳಲ್ಲಿ ಪ್ರದರ್ಶಿಸುವುದು ಬಸ್ ಸ್ಟ್ಯಾಂಡ್‌, ಮಹಲ್‌ಗಳು, ಹೋಟೆಲ್‌ಗಳು ಉದ್ಯಾನವನ ಅಲ್ಲದೇ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕ ಸಂಪರ್ಕ ಹೊಂದಿರುವ ಕಛೇರಿಯ ಮುಂದೆ ಹರ್ ಘರ್ ತಿರಂಗಾ ಹಾರಿಸುವ ಕಾರ್ಯಕ್ರಮಗಳ ಸಲುವಾಗಿ ರಾಷ್ಟ್ರಧ್ವಜ ಹಾರಿಸಲಾಗುವುದು ಎಂದರು.

ಧ್ವಜಗಳು ಸಿದ್ದಗೊಳ್ಳುತ್ತಿದ್ದು ಇದಕ್ಕಾಗಿ ಎಲ್ಲ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಹಾಗೂ ತಾಲ್ಲೂಕಿನ ಸರ್ಕಾರಿ ಕಛೇರಿಯ ಸಿಬ್ಬಂದಿಗಳಿಗೆ ತರಬೇತಿ ಶಿಬಿರಗಳು ನಡೆಯುತ್ತಿದೆ ಪೂರ್ಣ ಸಿದ್ದತೆಗಳು ಪೂರ್ಣಗೊಳ್ಳುತ್ತಿದ್ದು ಹೊಸನಗರ ತಾಲ್ಲೂಕಿನ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಎಲ್ಲ ಸಾರ್ವಜನಿಕರು ಸ್ವಯಂ ಸೇವಾ ಸಂಘದ ಪದಾಧಿಕಾರಿಗಳು ಸ್ವಯಂಪ್ರೇರಿತವಾಗಿ ಕಾರ್ಯಕ್ರಮಗಳೊಂದಿಗೆ ಕೈ ಜೋಡಿಸಿ ಆಗಸ್ಟ್ 15ನೇ ಅಮೃತ ಮಹೋತ್ಸವಕ್ಕೆ ಸಹಕರಿಸಬೇಕು ಹಾಗೂ ದೇಶ ಪ್ರೇಮ ಬೆಳೆಸಿಕೊಳ್ಳಬೇಕೆಂದರು.

ರಾಷ್ಟ್ರ ಧ್ವಜವನ್ನು ಮನೆ-ಮನೆಗೆ ವಿತರಿಸುವ ಕಾರ್ಯಕ್ರಮಕ್ಕೆ ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರು ಚಾಲನೆ ನೀಡಲಿದ್ದು ನಂತರ ರಾಷ್ಟ್ರ ಧ್ವಜವನ್ನು ಮನೆ-ಮನೆಗೆ ತಲುಪಿಸಲು ಹೊಸನಗರ ಪಟ್ಟಣ ಪಂಚಾಯಿತಿಯ ಸಿಬ್ಬಂದಿಗಳಿಗೆ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಹಾಗೂ ಇತರೆ ಸರ್ಕಾರಿ ಇಲಾಖೆಯ ಸಿಬ್ಬಂದಿಗಳಿಗೆ ಸೂಚಿಸಲಾಗಿದ್ದು ಮನೆ-ಮನೆಗೆ ತಲುಪಿಸುವ ಕಾರ್ಯ ನಡೆಯಲಿದೆ.

ಈ ಪೂರ್ವಭಾವಿ ಸಭೆಯಲ್ಲಿ ಹೊಸನಗರ ತಾಲ್ಲೂಕು ನೌಕರರ ಸಂಘದ ಅದ್ಯಕ್ಷರಾದ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಸಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಾಲಚಂದ್ರಪ್ಪ, ಕ್ಷೇತ್ರ ಶಿಕ್ಷಣಾದಿಕಾರಿ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ರಾಜೇಂದ್ರ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಇಕ್ಬಾಲ್, ರಾಘವೇಂದ್ರ, ಪಟ್ಟಣ ಪಂಚಾಯಿತಿ ಇಂಜಿನಿಯರ್ ಗಣೇಶ್ ಹೆಗ್ಡೆ, ಕಲಾವತಿ, ಶಿವಪ್ರಸಾದ್, ತಾಲ್ಲೂಕು ಕಛೇರಿಯ ಶಿರಾಸ್ಥೆದಾರ್ ಶ್ರೀಕಾಂತ್ ಹೆಗ್ಡೆ, ಪ್ರಥಮ ದರ್ಜೆ ಗುಮಾಸ್ಥರಾದ ವಿನಯ್ ಎಂ ಆರಾಧ್ಯ, ಚಿರಾಗ್ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು ಆಗಮಿಸಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here