ಹೊಸನಗರ: ತಾಲ್ಲೂಕಿನ 30 ಗ್ರಾಪಂ ವ್ಯಾಪ್ತಿಯಲ್ಲಿ ಶುಕ್ರವಾರ ಕೋವಿಡ್ ಲಸಿಕೆ ಮಹಾಮೇಳ: ತಹಶೀಲ್ದಾರ್ ವಿ.ಎಸ್. ರಾಜೀವ್

0
731

ಹೊಸನಗರ: ತಾಲ್ಲೂಕಿನ 30 ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿಯೂ ಶುಕ್ರವಾರ ಬೆಳಿಗ್ಗೆ 7 ಗಂಟೆಯಿಂದ ಕೋವಿಡ್ ಲಸಿಕೆ ಮಹಾಮೇಳ ನಡೆಯಲಿದೆ ಎಂದು ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ಹೇಳಿದರು.

ತಾಲ್ಲೂಕು ಕಛೇರಿಯ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿಗೆ ಒಟ್ಟು 3900 ಡೋಸ್ ಲಸಿಕೆ ಬಂದಿದ್ದು ಅದರಲ್ಲಿ ಕೋವ್ಯಾಕ್ಸಿನ್ 400 ಹಾಗೂ ಕೋವಿಶಿಲ್ಡ್ 3500 ಲಸಿಕೆಗಳನ್ನು ವಿತರಿಸಲಾಗುತ್ತದೆ.

30 ಗ್ರಾಮ ಪಂಚಾಯಿತಿಯ ಪಿಡಿಓಗಳು ಆಯಾಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಸದಸ್ಯರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೋವಿಡ್ ಲಸಿಕೆ ಪಡೆಯದವರಿಗೆ ಸಹಾಯ ಮಾಡಲಿದ್ದಾರೆ ಎಂದರು.

ಹೊಸನಗರ ಪಟ್ಟಣ ವ್ಯಾಪ್ತಿಯಲ್ಲಿ ಚರ್ಚ್ ರೋಡ್‌ನಲ್ಲಿ 70, ಮಾವಿನಕೊಪ್ಪದಲ್ಲಿ 70 ಹಾಗೂ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ 100 ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ಆಯಾಯ ಗ್ರಾಮ ಪಂಚಾಯಿತಿಯ ಜನಸಂಖ್ಯೆಗೆ ಅನುಗುಣವಾಗಿ ಉಳಿದ ಲಸಿಕೆಯನ್ನು ವಿತರಿಸಲಾಗಿದೆ. ಈ ಲಸಿಕೆ ಅಭಿಯಾನದಲ್ಲಿ ಹೊಸನಗರ ತಾಲ್ಲೂಕಿನ ಅಧಿಕಾರಿಗಳಾದ ತಾಲ್ಲೂಕು ಪಂಚಾಯಿತಿ ಇ.ಓ ಪ್ರವೀಣ್ ಹಾಗೂ ಸಿಬ್ಬಂದಿಗಳು, ಕ್ಷೇತ್ರಾಧಿಕಾರಿ ವೀರಭದ್ರಪ್ಪ ಹಾಗೂ ಸಿಬ್ಬಂದಿಗಳು, ಸಬ್ ಇನ್ಸ್‌ಪೆಕ್ಟರ್ ರಾಜೇಂದ್ರ ನಾಯ್ಕ್, ಸರ್ಕಲ್ ಇನ್ಸ್‌ಪೆಕ್ಟರ್ ಮಧುಸೂಧನ್ ಮತ್ತು ಸಿಬ್ಬಂದಿಗಳು ಆರೋಗ್ಯಾಧಿಕಾರಿ ಸುರೇಶ್ ಹಾಗೂ ಸಿಸ್ಟರ್‌ಗಳು ಹಾಗೂ ಸಿಬ್ಬಂದಿಗಳು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಾಲಚಂದ್ರಪ್ಪ ಮತ್ತು ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಹೊಸನಗರ ತಾಲ್ಲೂಕಿನ ಆಯ್ದ ಸರ್ಕಾರಿ ಅಧಿಕಾರಿಗಳು ಸಾಥ್ ನೀಡಲಿದ್ದು ಕೋವಿಶಿಲ್ಡ್ ಹಾಗೂ ಕೋವ್ಯಾಕ್ಸಿನ್ ಪಡೆಯದವರು ಲಸಿಕೆ ಪಡೆದು ಈ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಕೇಳಿಕೊಂಡರು.

ಜಾಹಿರಾತು

LEAVE A REPLY

Please enter your comment!
Please enter your name here