ಹೊಸನಗರ ತಾಲ್ಲೂಕಿನ 81 ಮುಜರಾಯಿ ದೇವಾಲಯದ ವ್ಯವಸ್ಥಾಪಕ ಸಮಿತಿ ಮುಕ್ತಾಯವಾಗಿದೆ: ತಹಶೀಲ್ದಾರ್ ವಿ.ಎಸ್. ರಾಜೀವ್

0
572

ಹೊಸನಗರ: ತಾಲ್ಲೂಕಿನಲ್ಲಿರುವ 81 ದೇವಾಲಯಗಳ ವ್ಯವಸ್ಥಾಪಕ ಸಮಿತಿಯ ಅವಧಿ ಮುಕ್ತಾಯವಾಗಿದೆ ಎಂದು ತಹಶೀಲ್ದಾರ್ ವಿ.ಎಸ್. ರಾಜೀವ್‌ರವರು ಹೇಳಿದರು.

ಅವರು ತಾಲ್ಲೂಕು ಕಛೇರಿಯ ಆವರಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿ ಮುಜರಾಯಿ ಇಲಾಖೆಗೆ ಸೇರಿದ ಒಟ್ಟು 81 ದೇವಾಲಯಗಳಿದ್ದು 3 ವರ್ಷಗಳ ಅವಧಿಗೆ ಪ್ರತಿ ದೇವಾಲಯಕ್ಕೆ 9 ಜನರನ್ನು ಒಳಗೊಂಡ ವ್ಯವಸ್ಥಾಪನ ಸಮಿತಿಯನ್ನು ರಚನೆ ಮಾಡಬೇಕಾಗಿದೆ ಹಿಂದಿನ ವ್ಯವಸ್ಥಾಪನ ಸಮಿತಿಯ ಅವಧಿ ಮುಕ್ತಾಯವಾಗಿರುವುದರಿಂದ ಮುಂದಿನ ಮೂರು ವರ್ಷದ ಸಮಿತಿ ರಚನೆ ಮಾಡಬೇಕಾಗಿದ್ದು ದೇವರಲ್ಲಿ ನಂಬಿಕೆ ಹೊಂದಿರುವ ಆಸಕ್ತರು ತಮ್ಮ ಹೋಬಳಿಯ ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಲೆಕ್ಕಾಧಿಕಾರಿಗಳಿಂದ ಅರ್ಜಿ ಪಡೆದು ಸೆಪ್ಟಂಬರ್ 30ರ ಒಳಗೆ ಅರ್ಜಿಯನ್ನು ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳಿಗೆ ಅಥವಾ ರಾಜಸ್ವ ನಿರೀಕ್ಷಕರುಗಳಿಗೆ ಸಲ್ಲಿಸಬಹುದಾಗಿದೆ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರೇಡ್2 ತಹಶೀಲ್ದಾರ್ ರಾಕೇಶ್, ಶಿರಾಸ್ಥೆದಾರ್ ಸುಧೀಂದ್ರ ಕುಮಾರ್, ಶ್ರೀಕಾಂತ್ ಹೆಗ್ಡೆ, ಪ್ರಥಮ ದರ್ಜೆ ಗುಮಾಸ್ಥರಾದ ವಿನಯ್ ಎಂ ಆರಾಧ್ಯ, ಮುಜರಾಯಿ ಇಲಾಖೆಯ ಗುಮಾಸ್ಥರಾದ ಶಿಲ್ಪಾ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here