23.2 C
Shimoga
Sunday, November 27, 2022

ಹೊಸನಗರ ಪಟ್ಟಣದ ರಸ್ತೆಗಳ ದುಸ್ಥಿತಿ ; ಆಮ್ ಆದ್ಮಿ ಪಕ್ಷದಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ

ಹೊಸನಗರ : ಇಲ್ಲಿನ ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಗುಂಡಿ ಬಿದ್ದಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದಿಂದ ವಿಭಿನ್ನ ರೀತಿಯ ಪ್ರತಿಭಟನೆ ಮಾಡಲಾಯಿತು.

ತುಂಬು ಗರ್ಭಿಣಿಯರನ್ನು ವಾಹನಗಳಲ್ಲಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋದಲ್ಲಿ ಹೊಂಡ ಗುಂಡಿಗಳಿಂದ ಕೂಡಿದ ರಸ್ತೆಯಿಂದಾಗಿ ಆಸ್ಪತ್ರೆ ತಲುಪುವ ಮೊದಲೇ ವಾಹನದಲ್ಲೇ ಹೆರಿಗೆಯಾಗುವುದಂತು ಗ್ಯಾರಂಟಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ ರಸ್ತೆ ಗುಂಡಿಗೆ ಹೂವಿನಹಾರ ಹಾಕಿ ಊದುಬತ್ತಿ ಹಚ್ಚಿ ವಿನೂತನವಾಗಿ ಪ್ರತಿಭಟನೆ ನಡೆಸಿ ಸರ್ಕಾರವನ್ನು ಎಚ್ಚರಿಸಿದರು.

ಹೊಸನಗರ ತಾಲೂಕು ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು, ಉಪಾಧ್ಯಕ್ಷ ಅಸನಬ, ಯುವ ಘಟಕದ ಅಧ್ಯಕ್ಷ ಚೇತನ್, ರೈತನಾಯಕ ಈಶ್ವರಪ್ಪಗೌಡ, ಸಾಮಾಜಿಕ ಹೋರಾಟಗಾರ ಟಿ.ಆರ್ ಕೃಷ್ಣಪ್ಪ, ಮಹಿಳಾ ಮುಖಂಡರಾದ ಫಾತಿಮಾ, ಜಗದೀಶ್ ಬಿದರಹಳ್ಳಿ ಇನ್ನೂ ಹಲವರು ಉಪಸ್ಥಿತರಿದ್ದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!