Rain Updates | ಇನ್ನೆರಡು ದಿನ ಮುಂದುವರೆಯಲಿದೆ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

0 2,532

ಬೆಂಗಳೂರು : ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದ್ದು, ಇನ್ನೂ ಎರಡು ದಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 20ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಬಳ್ಳಾರಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಹಾಸನ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಶಿವಮೊಗ್ಗ, ಮೈಸೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆ ಮಳೆ ಆಗುವ ಸಾಧ್ಯತೆ ಇದೆ. ಉಳಿದೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏ. 18ರ ಬೆಳಗ್ಗೆಯಿಂದ ಏ. 19ರ ಬೆಳಗ್ಗೆವರೆಗೆ ರಾಜ್ಯದ ಹಲವು ಹಲವೆಡೆ ಮಳೆಯಾಗಿದೆ. ಪ್ರಮುಖವಾಗಿ ಬೆಳಗಾವಿ ಜಿಲ್ಲೆ ಅಥಣಿ ಮತ್ತು ನಿಪ್ಪಾಣಿಯಲ್ಲಿ 6 ಸೆಂ.ಮೀ., ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ 4 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಬಾಗಲಕೋಟೆ ಜಿಲ್ಲೆಯ ಲೋಕಾಪುರ, ಗದಗ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಬೆಳಗಾವಿ ಜಿಲ್ಲೆ ಸೇಡಬಾಳ, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆ, ತ್ಯಾಗರ್ತಿ, ಹಾಸನ ಜಿಲ್ಲೆಯ ಬೇಲೂರಿನಲ್ಲಿ ತಲಾ ಮೂರು ಸೆಂ.ಮೀ. ಮಳೆಯಾಗಿದೆ.

ಶುಕ್ರವಾರ ಸಂಜೆ ಗುಡುಗು, ಸಿಡಿಲು ಆರ್ಭಟದೊಂದಿಗೆ ಸಾಧಾರಣದಿಂದ ಜೋರು ಮಳೆ ಸುರಿಯಿತು. ಶಿವಮೊಗ್ಗ, ಶಿಕಾರಿಪುರ, ಸಾಗರ, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ ತಾಲೂಕಿನಲ್ಲಿ ಚದುರಿದಂತೆ ಮಳೆ ಸುರಿಯಿತು. ಕೆಲವೆಡೆ ಮಳೆಗಿಂತ ಬಿರುಗಾಳಿ, ಸಿಡಿಲಿನಿಂದ ಹಾನಿಯೇ ಅಧಿಕವಾಗುತ್ತಿದೆ.

ಕೆಲವು ಭಾಗಗಳಲ್ಲಿ ಶುಕ್ರವಾರ ರಾತ್ರಿ ಆರಂಭವಾದ ಗುಡುಗು ಹಾಗೂ ಮಳೆ ಶನಿವಾರ ಬೆಳಗಿನವರೆಗೂ ಮುಂದುವರಿದಿದೆ. ಇದರಿಂದ ಮಲೆನಾಡು, ಕರಾವಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಐದು ತಿಂಗಳ ಬಳಿಕ ಕೊನೆಗೂ ಮಳೆರಾಯನ ದರ್ಶನವಾಗಿದೆ. ನಗರದ ಕೆಲವು ಭಾಗಗಳಲ್ಲಿ ತುಂತುರು ಮಳೆ ಸುರಿದಿದೆ.

Leave A Reply

Your email address will not be published.

error: Content is protected !!