ಹೊಸನಗರ ಪದವಿ ಪೂರ್ವ ಕಾಲೇಜಿಗೆ ಶೇ. 69.16% ಫಲಿತಾಂಶ

0
681

ಹೊಸನಗರ: 2022ನೇ ಏಪ್ರಿಲ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69.16% ಫಲಿತಾಂಶ ಲಭ್ಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸಾಕಮ್ಮನವರು ತಿಳಿಸಿದ್ದಾರೆ.

ಅವರು ಕಾಲೇಜ್ ಆವರಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಹೊಸನಗರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ 169 ವಿದ್ಯಾರ್ಥಿ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು ಅದರಲ್ಲಿ 125 ವಿದ್ಯಾರ್ಥಿ ವಿದ್ಯಾರ್ಥಿನಿಯರು ಉತ್ತೀರ್ಣರಾಗಿರುತ್ತಾರೆ. ಶೇ. 73% ಬಂದಿರುತ್ತದೆ. ಕಾಮರ್ಸ್ಸ್ ವಿಭಾಗದಲ್ಲಿ 109 ವಿದ್ಯಾರ್ಥಿ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು ಅದರಲ್ಲಿ 75 ವಿದ್ಯಾರ್ಥಿ ವಿದ್ಯಾರ್ಥಿನಿಯರು ಉತ್ತೀರ್ಣರಾಗಿರುತ್ತಾರೆ. ಶೇ. 68% ಬಂದಿರುತ್ತದೆ. ವಿಜ್ಞಾನ ವಿಭಾಗದಲ್ಲಿ 56 ವಿದ್ಯಾರ್ಥಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು 31 ವಿದ್ಯಾರ್ಥಿಗಳು ಪಾಸ್ ಆಗಿರುತ್ತಾರೆ.

ನಮ್ಮ ಕಾಲೇಜಿನಲ್ಲಿ ಡಿಸ್ಟಿಂಗ್ಷನ್ 13 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 127 ಹಾಗೂ ದ್ವಿತೀಯ ದರ್ಜೆಯಲ್ಲಿ 57 ವಿದ್ಯಾರ್ಥಿಗಳು ಹಾಗೂ ತೃತೀಯ ದರ್ಜೆಯಲ್ಲಿ 34 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.

ಅಭಿನಂದನೆ:

ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 69.16% ಫಲಿತಾಂಶ ತಂದು ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹೆಸರು ತಂದಿದ್ದಾರೆ ವಿದ್ಯಾರ್ಥಿ ವಿದ್ಯಾರ್ಥಿನಿಯರ ಸಾಧನೆ ಅಮೋಘವಾಗಿದ್ದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸ ವೃಂದಕ್ಕೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಶಾಲಾ ಆಡಳಿತ ಮಂಡಳಿ ನೌಕರ ವರ್ಗಕ್ಕೆ ಪ್ರಾಂಶುಪಾಲರಾದ ಸಾಕಮ್ಮ ಈ ಮೂಲಕ ಅಭಿನಂದಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here