ಹೊಸನಗರ: ಮಾರಿಗುಡ್ಡದ ಅಂಗನವಾಡಿಯಲ್ಲಿ ಕೋವಿಡ್-19 ಲಸಿಕೆ

0
559

ಹೊಸನಗರ: ಹೊಸನಗರದ ಆರೋಗ್ಯ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿಯ ಸಹಭಾಗಿತ್ವದಲ್ಲಿ ದೇಶದಲ್ಲಿ ಕೋವಿಡ್-19 2ನೇ ಅಲೆ ಅಬ್ಬರಿಸುತ್ತಿದ್ದು ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾಗಿರುವ ಕೋವಿಡ್-19 ಲಸಿಕೆ ಕಾರ್ಯಕ್ರಮವನ್ನು 45 ವರ್ಷ ಮೇಲ್ಪಟ್ಟವರಿಗೆ ಹಾಕುವ ಕಾರ್ಯಕ್ರಮವನ್ನು ಮಾರಿಗುಡ್ಡದ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಬಾಲಚಂದ್ರಪ್ಪ, 45 ವರ್ಷ ಮೇಲ್ಪಟ್ಟವರು ಪ್ರತಿಯೊಬ್ಬರು ಕೋವಿಡ್-19 ಲಸಿಕೆ ಚುಚ್ಚು ಮದ್ದನ್ನು ಹಾಕಿಸಿಕೊಳ್ಳಬೇಕು ಹಾಗೂ ಕೊರೊನಾವನ್ನು ತಡೆ ಹಿಡಿಯಬೇಕಾದರೆ ಲಸಿಕೆಯ ಜೊತೆಗೆ ಸಾಮಾಜಿಕ ಅಂತರ, ಮಾಸ್ಕ್ ಗಳನ್ನು ಹಾಕಿಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಇಂಜಿನಿಯರ್ ಬಸವರಾಜ್, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ರಮೇಶ್, ಲಿಖಿತ್‌ರಾಜ್, ಶೋಭಾ, ಅಂಗನವಾಡಿ ಕಾರ್ಯಕರ್ತೆ ಸುಜಾತ, ಆಶಾ ಕಾರ್ಯಕರ್ತೆ ಶೋಭಾ, ರೇಖಾ, ಶ್ವೇತಾ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here