ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆ ಆಗ್ರಹಿಸಿ ಬೃಹತ್ ಪ್ರತಿಭಟನೆ: ಕ್ಷೇತ್ರ ಮರಳಿ ಪಡೆಯುವವರೆಗೆ ನಮ್ಮ ಹೋರಾಟ ನಿಲ್ಲದು – ಮೂಲೆಗದ್ದೆ ಶ್ರೀಗಳು

0
830

ಹೊಸನಗರ: ಹೊಸನಗರ ವಿಧಾನಸಭಾ ಕ್ಷೇತ್ರವು ತಾಲ್ಲೂಕಿನಲ್ಲಿ ಈ ಹಿಂದೆ ಅಸ್ತಿತ್ವದಲ್ಲಿತ್ತು. ಆದರೆ ನಂತರದ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯ ಸಮಯದಲ್ಲಿ ಹೊಸನಗರ ಕ್ಷೇತ್ರವನ್ನು ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ ಸೇರಿಸಿ ಹೊಸನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಾಗಿತ್ತು.

ಜನಸಂಖ್ಯೆಯ ಅಧಾರದ ಮೇಲೆ ಕ್ಷೇತ್ರ ವಿಂಗಡಣೆ ಮಾಡಿರುವುದರಿಂದ ನಮ್ಮ ಕ್ಷೇತ್ರ ನಷ್ಟವಾಗಿದೆ ಈ ಕ್ಷೇತ್ರವನ್ನು ಮರಳಿ ಪಡೆಯುವವರೆಗೆ ನಮ್ಮ ಹೋರಾಟ ನಿಲ್ಲದು ಎಂದು ಹೊಸನಗರ ತಾಲ್ಲೂಕು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿಯವರು ಹೇಳಿದರು.

ಇಂದು ಹೊಸನಗರ ಕ್ಷೇತ್ರವನ್ನು ಮರಳಿ ಪಡೆಯುವ ಯತ್ನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹೊಸನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರವನ್ನು ಕಳೆದುಕೊಂಡು ಸುಮಾರು ವರ್ಷಗಳು ಕಳೆದಿದೆ. ಕಳೆದು ಹೋಗುವ ಸಂದರ್ಭದಲ್ಲಿ ಎಲ್ಲ ಪಕ್ಷದ ರಾಜಕೀಯ ನಾಯಕರು ಹೋರಾಟ ಮಾಡಿದ್ದರೆ ಈಗ ಕಷ್ಟ ಪಡುವ ಅಗತ್ಯವಿರಲಿಲ್ಲ. ಆದರೆ ಈಗ ವಿಧಾನ ಸಭಾ ಕ್ಷೇತ್ರವನ್ನು ಕಳೆದುಕೊಂಡಾಗಿದೆ. ಈ ಕ್ಷೇತ್ರವನ್ನು ಮರಳಿ ಪಡೆಯುವವರೆಗೆ ನಮ್ಮ ಹೋರಾಟ ನಿಲ್ಲದು ಎಂದು ಹೇಳಿದರು.

ಹೊಸನಗರ ತಾಲ್ಲೂಕಿನ ಎಲ್ಲ ಪಕ್ಷದ ನಾಯಕರು ಪಕ್ಷಾತೀತವಾಗಿ ಪಾಲ್ಗೊಂಡು ಮಾಜಿ ಶಾಸಕ ಬಿ.ಸ್ವಾಮಿರಾವ್‌ರವರ ನೇತೃತ್ವದಲ್ಲಿ ಮಾವಿನಕೊಪ್ಪದಿಂದ ಹೊಸನಗರ ತಾಲ್ಲೂಕು ಕಛೇರಿಯವರೆಗೆ ಪಾದಯಾತ್ರೆ ಮೂಲಕ ಕ್ಷೇತ್ರವನ್ನು ಮರಳಿ ಪಡೆಯವ ಸಲುವಾಗಿ ಪ್ರತಿಭಟನೆ ನಡೆಸಿ ಹೊಸನಗರದ ತಹಶೀಲ್ದಾರ್‌ರವರಿಗೆ ಮನವಿ ಪತ್ರವನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಪ್ರತಿಭಟನೆಯಲ್ಲಿ ನಿಟ್ಟೂರು ಮಠದ ರೇಣುಕಾನಂದ ಸ್ವಾಮೀಜಿ, ಬದ್ರಿಯಾ ಮಸೀದಿಯ ಗುರುಗಳಾದ ಹಂಜ ಮಧಿನಿ, ಜಾಮೀಯ ಮಸೀದಿಯ ಗುರುಗಳಾದ ಮಸೂದ್ ಮಲ್ಲಿಕ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಸುರೇಶ್ ಸ್ವಾಮಿರಾವ್, ಅಂಬೇಡ್ಕರ್ ನಿಗಮದ ನಿರ್ದೆಶಕರಾದ ಎನ್.ಆರ್.ದೇವಾನಂದ್, ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ಎ.ವಿ.ಮಲ್ಲಿಕಾರ್ಜುನ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾದ ಎಂ.ವಿ.ಜಯರಾಮ್, ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಗುಲಾಬಿ ಮರಿಯಪ್ಪ, ಉಪಾಧ್ಯಕ್ಷಣಿ ಕೃಷ್ಣವೇಣಿ, ಸದಸ್ಯರಾದ ಗುರುರಾಜ್, ರಮೇಶ್ ಶೆಟ್ಟಿ, ಶಾಸಕರ ಆಪ್ತ ಕಾರ್ಯದರ್ಶಿ ಮಂಡಾಣಿ ಮೋಹನ್, ಎಂ.ಎನ್.ಸುಧಾಕರ್, ಬಿ.ಯುವರಾಜ್, ಬಾವಿಕಟ್ಟೆ ಸತೀಶ್, ಹಾಲಗದ್ದೆ ಉಮೇಶ್, ತಾಲೂಕು ಬಿಜೆಪಿ ಅಧ್ಯಕ್ಷ ಗಣಪತಿ ಬೆಳಗೋಡು, ತಾಲ್ಲೂಕು ಪಂಚಾಯಿತಿ ಸದಸ್ಯೆ ರಕ್ಮೀಣಿರಾಜು, ಪಟ್ಟಣ ಪಂಚಾಯಿತಿ ಸದಸ್ಯೆ ಗಾಯಿತ್ರಿ ನಾಗರಾಜ್, ಗೌತಮ್ ಕುಮಾರಸ್ವಾಮಿ ಎಲ್ಲ ಪಕ್ಷದ ರಾಜಕೀಯ ನಾಯಕರು ಹಾಗೂ ತಾಲ್ಲೂಕಿನ ಸಾರ್ವಜನಿಕರು ಭಾಗವಹಿಸಿ ತಹಶೀಲ್ದಾರ್ ಮೂಲಕ ಮನವಿ ಪತ್ರ ನೀಡಿದರು.

ಜಾಹಿರಾತು

LEAVE A REPLY

Please enter your comment!
Please enter your name here