24.3 C
Shimoga
Friday, December 9, 2022

ಹೊಸನಗರ ; ಸಂಭ್ರಮದ ಮಕ್ಕಳ ದಿನಾಚರಣೆ ಹಾಗೂ ರಾಜ್ಯೋತ್ಸವ ಕಾರ್ಯಕ್ರಮ

ಹೊಸನಗರ: ಪಟ್ಟಣದ ಉರ್ದು ಶಾಲೆ ಮುಂಭಾಗದ ಅಂಗನವಾಡಿಯಲ್ಲಿ ಮಲೆನಾಡು ಪ್ರೌಢಶಾಲೆಯಲ್ಲಿ ವಿದ್ಯಾ ಸನ್ನಿಧಾನಂ ನರ್ಸರಿಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಚಿಣ್ಣರುಗಳಿಂದ ಹಾಡು, ನೃತ್ಯ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಮಲೆನಾಡು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಪದಾಧಿಕಾರಿಗಳು ಕಾರ್ಯಕ್ರಮ ಆಯೋಜಿಸಿದರು‌. ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಉಚಿತ ಪೆನ್ನುಗಳನ್ನು ವಿತರಿಸಿದರು.

ಕು|| ಅರ್ಚನಾ ಹಾಗೂ ರಂಜಿತಾ ಪ್ರಾರ್ಥಿಸಿದರು. ಮುಸೈನಾ ಬಾನು ಕಾರ್ಯಕ್ರಮ ನಿರೂಪಿಸಿದರು. ಎಂ ಮಾನಸ ಸ್ವಾಗತಿಸಿದರು.

ಇಂದಿರಾಗಾಂಧಿ ವಸತಿ ಶಾಲೆ :

ಹೊಸನಗರ ಪಟ್ಟಣದ ಒಕ್ಕಲಿಗರ ಭವನದಲ್ಲಿರುವ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕನ್ನಡ ರಾಜ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಪುನೀತ್ ರಾಜ್‍ಕುಮಾರ್ ಕನ್ನಡ ಸಂಘದ ಸಹಯೋಗದೊಂದಿಗೆ ಪ್ರಾಂಶುಪಾಲ ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹಾಲಗದ್ದೆ ಉಮೇಶ್, ಪುನೀತ್ ರಾಜ್‍ಕುಮಾರ್ ಕನ್ನಡ ಸಂಘದ ಅಧ್ಯಕ್ಷ ಪ್ರಶಾಂತ್, ಉಪಾಧ್ಯಕ್ಷ ಸುಮಿತ್ ಸದಾನಂದ, ಕನ್ನಡ ವಿಭಾಗದ ತಿರುಕೇಶ್, ಅಶ್ವಿನಿ, ಭಾರತಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಾದ ನಂದಿನಿ, ಹಾಲು ಪ್ರವೀಣ್ ಅವರನ್ನು ಹಾಗೂ ಪ್ರಾಂಶುಪಾಲ ಚಂದ್ರಶೇಖರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಂತೋಷ ಸ್ವಾಗತಿಸಿದರು. ಪ್ರಿಯಾ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಶಿಕ್ಷಕ ಪರಮೇಶ್ವರ ಅಭಾರ ಮನ್ನಿಸಿದರು.

ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅಯೋಜಿಸಲಾಗಿತ್ತು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!