ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಮಟ್ಟದ ಬೃಹತ್ ಆರೋಗ್ಯ ಮೇಳ

0
859

ಹೊಸನಗರ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹೊಸನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಆಸ್ಪತ್ರೆ ತಾಲೂಕಾಡಳಿತ ತಾಲೂಕ್ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬೃಹತ್ ಆರೋಗ್ಯ ಮೇಳವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಿ.ಆರ್. ಪ್ರವೀಣ್ ಉದ್ಘಾಟಿಸಿದರು.

ಈ ಸಮಾರಂಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಗುಡದಪ್ಪ, ಗ್ರೇಡ್ 2 ತಹಶೀಲ್ದಾರ್ ತಾಲೂಕು ಆರೋಗ್ಯಾಧಿಕಾರಿ ಡಾ. ಸುರೇಶ್, ತಾಲೂಕು ವೈದ್ಯಾಧಿಕಾರಿ ಡಾ. ಶಾಂತರಾಜು, ಡಾ. ಲಿಂಗರಾಜ್, ಡಾ. ಶಿವಯೋಗಿ, ಡಾ. ಪತಾಂಜಲಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಶಾಂತರಾಜ್ ಪ್ರಸ್ತಾವಿಕವಾಗಿ ಮಾತನಾಡಿ, ಪ್ರತಿ ಹಳ್ಳಿಗಳಲ್ಲಿ ಈಗ ಆರೋಗ್ಯ ಸೇವೆ ಲಭ್ಯವಿದೆ ಎಲ್ಲೆಲ್ಲಿಯೂ ಆರೋಗ್ಯ ಎಲ್ಲ ಕಡೆ ಆರೋಗ್ಯ ಸಂದೇಶದೊಂದಿಗೆ ಆರೋಗ್ಯ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಡ್, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಸೇವೆಗಳು ನಿರಂತರವಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಾಹಿರಾತು

LEAVE A REPLY

Please enter your comment!
Please enter your name here