ಬಾಳೂರು ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ

0 369

ರಿಪ್ಪನ್‌ಪೇಟೆ : ಬಾಳೂರು ಗ್ರಾಮ ಪಂಚಾಯ್ತಿಯಲ್ಲಿ ಸೋಮವಾರ ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ದೂರಿಯಾಗಿ ಭರಮಾಡಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಸಂವಿಧಾನದ
ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಶ್ರೀನಿವಾಸ್ ವಹಿಸಿದ್ದರು.


ನೋಡಲ್ ಅಧಿಕಾರಿಯಾಗಿ ತಾಪಂ ಸಹಾಯಕ ನಿರ್ದೇಶಕ ರಾಜೇಂದ್ರ ಕುಮಾರ್ ಭಾಗವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ, ಗ್ರಾಪಂ ಸದಸ್ಯರಾದ ದಿವಾಕರ, ಶಶಿಕಲಾ, ಲೀಲಾವತಿ ದೊಡ್ಡಯ್ಯ, ಪಿಡಿಒ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು, ಬಾಳೂರು ಮತ್ತು ನೆವಟೂರು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!