Loksabha Election | ಏ.26 ರಂದು ವೇತನ ಸಹಿತ ರಜೆ

0 226

ಚಿಕ್ಕಮಗಳೂರು : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ಹಿನ್ನಲೆಯಲ್ಲಿ ಲೋಕಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಮತ್ತು ಟೀ/ಕಾಫಿ ಪ್ಲಾಂಟೆಷನ್‌ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ನೀಡಬೇಕೆಂದು ಚಿಕ್ಕಮಗಳೂರು ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!