ಸಿದ್ದರಾಮಯ್ಯ ಬಜೆಟ್‌ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು ?

0 634

ಶಿವಮೊಗ್ಗ: ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಕಾಂಗ್ರೆಸ್ ಸರ್ಕಾರದ ಆಯ-ವ್ಯಯ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗ ಜಿಲ್ಲೆಗೂ ಸಹ ಕೆಲವೊಂದು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಕೆಲವೊಂದು ಘೋಷಣೆ ಮಾಡಿರುವ ಸಿದ್ದರಾಮಯ್ಯ ಅನುದಾನವನ್ನೂ ಸಹ ಮೀಸಲಿಡುವುದಾಗಿ ಹೇಳಿದ್ದಾರೆ.

ಫುಡ್ ಪಾರ್ಕ್ :
ಶಿವಮೊಗ್ಗದ ಸೋಗಾನ ವಿಮಾನ ನಿಲ್ದಾಣದ ಬಳಿಯಲ್ಲಿ ಆಹಾರ ಪಾರ್ಕ್ ನಿರ್ಮಾಣ.

ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ :
ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ಒದಗಿಸಲು ಕ್ರಮ.

ರೈಲ್ವೆ ಮೇಲ್ಸೇತುವೆ :
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಬೊಮ್ಮನಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್’ನಲ್ಲಿ ಮೇಲ್ಸೇತುವೆ ನಿರ್ಮಾಣ.

ತಾರಾಲಯ :
ಶಿವಮೊಗ್ಗದಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು. ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪನೆ.

ಹೈ-ಸೆಕ್ಯೂರಿಟಿ ಕಾರಾಗೃಹ :
ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹವನ್ನು ನಿರ್ಮಾಣ.

ಹೈಟೆಕ್ ಮೀನು ಮಾರುಕಟ್ಟೆ :
ಭದ್ರಾವತಿಯಲ್ಲಿ ಅತ್ಯಾಧುನಿಕ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣ

Leave A Reply

Your email address will not be published.

error: Content is protected !!