ಹೊಸನಗರ ಪಟ್ಟಣದ ವಿವಿಧೆಡೆ ಸಂಭ್ರಮದ 77ನೇ ಸ್ವಾತಂತ್ರ್ಯ ದಿನಾಚರಣೆ

0 33

ಹೊಸನಗರ : ಪಟ್ಟಣದಾದ್ಯಂತ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದ್ದು ಎಲ್ಲ ಸರ್ಕಾರಿ ಕಚೇರಿ, ಹೋಟೆಲ್, ಅಂಗಡಿ ಮುಂಗಟ್ಟು, ವಾಹನಗಳ ಹಾಗೂ ಮನೆಗಳ ಮೇಲೆ ತ್ರಿವರ್ಣ ಧ್ವಜ ರಾರಾಜಿಸುತ್ತಿದ್ದಿದ್ದು ಕಂಡುಬಂದಿತು.

ಪಟ್ಟಣ ಪಂಚಾಯತಿ ಆವರಣದಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಆಡಳಿತಾಧಿಕಾರಿ ತಹಶೀಲ್ದಾರ್ ರಾಕೇಶ್ ಫಾನ್ಸಿಸ್ ಬ್ರೀಟೋರವರು ನೆರವೇರಿಸಿದರು. ಈ ಸಂದರ್ಭದಲ್ಲಿಪಟ್ಟಣ ಪಂಚಾಯತಿಯ ಎಲ್ಲ ಸದಸ್ಯರು ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಬಾಲಚಂದ್ರಪ್ಪ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೊಸನಗರ ಕೋಟೆಗಾರ್ ವಿದ್ಯಾವರ್ಧಕ ಸಂಘದ ಆವರಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಸಂಘದ ಗೌರವಾಧ್ಯಕ್ಷರಾದ ಬಿ. ಗೋವಿಂದಪ್ಪನವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ನಿರ್ದೆಶಕರ ಸದಸ್ಯರು ಮಹಿಳಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಸಾರ್ವಜನಿಕ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಶಾಂತರಾಜ್ ಧ್ವಜಾರೋಹಣ ನಡೆಸಿ ಏಕತೆ ಐಕ್ಯತೆಯ ಬಗ್ಗೆ ಸಂದೇಶ ನೀಡಿದರು.
Leave A Reply

Your email address will not be published.

error: Content is protected !!