30 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು !

0 675

ಮೂಡಿಗೆರೆ  : ಚಾಲಕನ ನಿಯಂತ್ರಣ ತಪ್ಪಿ ಕಾರುವೊಂದು 30 ಅಡಿ ಆಳದ ಕಂದಕಕ್ಕೆ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್‌ನ ಮಲಯಮಾರುತ ಸಮೀಪದಲ್ಲಿ ನಡೆದಿದೆ.

ಮೇಲಿಂದ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನಜ್ಜು-ಗುಜ್ಜಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯ‌ವಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆರು ಮಂದಿ ಪ್ರವಾಸಿಗರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟ್ಟಿದ್ದರು. ಈ ವೇಳೆ ತಡೆಗೋಡೆ ಇಲ್ಲದ ಕಾರಣಕ್ಕೆ ತಿರುವಿನಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದ. ಹೀಗಾಗಿ ಏಕಾಏಕಿ ಕಾರು ಕಂದಕ್ಕೆ ಬಿದ್ದಿತ್ತು.

ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂದಕ್ಕೆ ಬಿದ್ದಿದ್ದ ಕಾರನ್ನು ಮೇಲೆತ್ತುವ ಕೆಲಸವನ್ನು ಮಾಡಿದ್ದಾರೆ.

Leave A Reply

Your email address will not be published.

error: Content is protected !!