ಖಾಸಗಿ ಬಸ್‌ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಸ್ಥಳದಲ್ಲೇ ಸಾವು..!

0 191

ಶಿವಮೊಗ್ಗ : ತಾಲ್ಲೂಕು ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ ಐದು ಗಂಟೆ ಸುಮಾರಿಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಖಾಸಗಿ ಬಸ್‌ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ ಸರಿದು ನಿಂತಿದೆ. 

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://fb.watch/lzU5YN9NyL/?mibextid=ZbWKwL

ಆನೆ ಕ್ಯಾಂಪ್ ಗೂ ಮೊದಲು ಸಿಗುವ ಫಿಶ್ ಹೋಟೆಲ್ನ ಸಮೀಪ ಘಟನೆ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.


ತಕ್ಷಣವೇ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರು ತೀರ್ಥಹಳ್ಳಿಗೆ ಹೋಗುತ್ತಿದ್ದು ತೀರ್ಥಹಳ್ಳಿ ಕಡೆಯಿಂದ ಖಾಸಗಿ ಬಸ್ ಶಿವಮೊಗ್ಗಕ್ಕೆ ಬರುತ್ತಿತ್ತು. ಇನ್ನೂ ಗಾಯಾಳುಗಳ ಗುರುತು ಇನ್ನಷ್ಟೇ ತಿಳಿದು ಬರಬೇಕಾಗಿದೆ.

Leave A Reply

Your email address will not be published.

error: Content is protected !!