ಸೊರಬ ; ಸಂಭ್ರಮ – ಸಡಗರದಿಂದ ನಾಗರ ಪಂಚಮಿ ಹಬ್ಬ ಆಚರಣೆ

0 95

ಸೊರಬ: ಪಟ್ಟಣ ಸೇರಿ ತಾಲೂಕಿನಾದ್ಯಂತ ಸಂಭ್ರಮ– ಸಡಗರದಿಂದ ನಾಗರ ಪಂಚಮಿ ಆಚರಿಸಲಾಗುತ್ತಿದೆ. ಹಲವರು ಮನೆಯಲ್ಲಿಯೇ ನಾಗರ ಮೂರ್ತಿಗೆ ವಿಶೇಷ ಪೂಜೆ ಮಾಡಿ ಹಾಲೆರೆದರೆ, ಕೆಲವರು ದೇವಸ್ಥಾನ ಆವರಣದಲ್ಲಿರುವ ಹುತ್ತ, ನಾಗರ ಮೂರ್ತಿಗೆ ಹಾಲೆರೆದರು.

ಮನೆ ಬಾಗಿಲಿಗೆ ಮಾವಿನ ತೋರಣ ಕಟ್ಟಿ, ಮನೆ ಮುಂದೆ ರಂಗೋಲಿ ಹಾಕುವ ಮೂಲಕ ಮಹಿಳೆಯರು ಬೆಳಿಗ್ಗೆಯೇ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಸಂಭ್ರಮದಿಂದ ಸ್ವಾಗತಿಸಿದರು.

ಶೇಂಗಾ, ಪುಟಾಣಿ, ಕೊಬ್ಬರಿ ಉಂಡಿ ಸೇರಿದಂತೆ ಇತರ ಸಿಹಿ ಪದಾರ್ಥಗಳನ್ನು ದೇವರಿಗೆ ನೈವೇದ್ಯ ಅರ್ಪಿಸಲಾಯಿತು.

ಕಾನುಕೇರಿಯ ಅಶ್ವತ್ಥ ಮರದ ಕೆಳಗಿರುವ ನಾಗರ ಮೂರ್ತಿಗೆ ಮಹಿಳೆಯರು ಹಾಲೆರೆದರು. ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಮೀಪ ಇರುವ ನಾಗರ ಮೂರ್ತಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ರಂಗನಾಥ ದೇವಸ್ಥಾನದ ಆವರಣ, ಹಿರೇಶಕುನದ ಅರಳಿ ಮರದ ಸಮೀಪದಲ್ಲಿರುವ ನಾಗರ ಮೂರ್ತಿಗೂ ಪೂಜೆ ನಡೆಯಿತು.

Leave A Reply

Your email address will not be published.

error: Content is protected !!