ಕಲಗೋಡು ರತ್ನಾಕರ ಅವರಿಗೆ ಡಾ.ಚಿಕ್ಕಕೋಮಾರಿಗೌಡ ದತ್ತಿ ಪ್ರಶಸ್ತಿ ಪ್ರದಾನ

0 1,128

ಹೊಸನಗರ : 34 ವರ್ಷಗಳ ತಮ್ಮ ಸುಧೀರ್ಘ ರಾಜಕಾರಣ ಜೀವನದಲ್ಲಿನ ಜನಸೇವೆ ಪರಿಗಣಿಸಿ ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ವತಿಯಿಂದ ಕೊಡ ಮಾಡುವ ‘ಅತ್ಯುತ್ತಮ ಪಂಚಾಯತ್ ರಾಜ್ ಜನಪ್ರತಿನಿಧಿ’ ಪ್ರಶಸ್ತಿಗೆ ಭಾಜನರಾಗಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಅವರಿಗೆ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಡಾ. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2021-22ನೇ ಸಾಲಿನ ಡಾ.ಚಿಕ್ಕಕೋಮಾರಿಗೌಡ ದತ್ತಿ ಪ್ರಶಸ್ತಿ ವಿತರಣೆ ಮಾಡಲಾಯಿತು.

ಗುಂಡ್ಲುಪೇಟೆ ಶಾಸಕ ಹೆಚ್.ಎಂ. ಗಣೇಶ್ ಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಪಂಚಾಯತ್ ರಾಜ್ ಪರಿಷತ್ತಿನ ಅಧ್ಯಕ್ಷ ಸಿ. ನಾರಾಯಣಸ್ವಾಮಿ, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಪ್ರಮೋದ್ ಹೆಗಡೆ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಮ್ಮ ರಾಜಕೀಯ ಜೀವನದಲ್ಲಿ ‘ಸೋಲಿಲ್ಲದ ಸರದಾರ’ ಎಂದೇ ಖ್ಯಾತರಾಗಿರುವ ಕಲಗೋಡು ರತ್ನಾಕರ ಅವರಿಗೆ, 80ರ ದಶಕದಲ್ಲಿ ಗ್ರಾಮೀಣ ಭಾಗದ ಜೀವನಾಡಿ ಅಂತಿದ್ದ ಹಿರಿಯ ರಾಜಕಾರಣಿ, ಮಾಜಿ ಸಚಿವ ದಿವಂಗತ ಅಬ್ದುಲ್ ನಜೀರ್ ಸಾಬ್ ಜನ್ಮದಿನದಂದೇ ಈ ಪ್ರಶಸ್ತಿ ಪ್ರದಾನ ನಡೆದಿರುವುದು ಅವರ ಸರಳ ರಾಜಕೀಯ ಬದುಕಿಗೆ ಹಿಡಿದ ಕೈಗನ್ನಡಿ ಎನ್ನುವಂತಿದೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕಲಗೋಡು ರತ್ನಾಕರ, ತಮ್ಮ ನಿಸ್ವಾರ್ಥ ಜನಸೇವೆಗಾಗಿ ಈ ಪ್ರಶಸ್ತಿ ತಮಗೆ ಸಂದಿದ್ದು, ಮುಂದೆಯೂ ಚ್ಯುತಿ ಬಾರದಂತೆ ಜನಸೇವೆ ಮಾಡುವ ಸದುದ್ದೇಶ ಹೊಂದಿದ್ದೇನೆ. ಅಲ್ಲದೆ, ಪ್ರಶಸ್ತಿಗೆ ತಮ್ಮನ್ನು ಆಯ್ಕೆ ಮಾಡಿದ ಪರಿಷತ್ ಸದಸ್ಯರು ಹಾಗೂ ಕಾರ್ಯಕ್ರಮದ ರೂವಾರಿಗಳಿಗೆ ಆಭಾರಿ ಆಗಿರುವುದಾಗಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!