ಮಧು ಬಂಗಾರಪ್ಪ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ; ಅವಹೇಳನಕಾರಿ ಪೋಸ್ಟ್‌

0 420

ಶಿವಮೊಗ್ಗ : ಶಿಕ್ಷಣ ಸಚಿವ (Education Minister) ಮಧು ಬಂಗಾರಪ್ಪ (Madhu Bangarappa) ಅವರಿಗೂ ನಕಲಿ ಖಾತೆಯ ಬಿಸಿ ತಟ್ಟಿದೆ. ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ (Facebook) ನಕಲಿ ಖಾತೆ ತೆರೆದು ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ (Rahul Gandhi), ಸಚಿವರು, ಕಾಂಗ್ರೆಸ್ ಪಕ್ಷದ (Congress Party) ವಿರುದ್ಧ ಪೋಸ್ಟ್ ಮಾಡಲಾಗಿದೆ.


ಅಚ್ಚೆದಿನ್ ಎಲ್ಲಿದೆ ಅಂತಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಎಲ್ಲಿ ಎಂದು ಕೇಳುತ್ತಲೇ ಇದ್ದಾರೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ನಕಲಿ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

ಶ್ರೀ ಮಾನ್ಯ ಮಧು ಬಂಗಾರಪ್ಪ ಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಎಂಬ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪೋಸ್ಟ್ ಮಾಡಲಾಗಿದೆ. ಅಲ್ಲದೆ, ಸಾವಿರಾರು ಕೋಟಿ ರೂ. ಹಗರಣ ನಡೆಸಿದ್ದನ್ನು ಮುಂದಿಟ್ಟುಕೊಂಡು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಅಣಕಿಸಿ ಪೋಸ್ಟ್ ಮಾಡಲಾಗಿದೆ.

ಫೇಸ್‍ಬುಕ್ ಗ್ರೂಪ್ ಡಿಪಿಯಲ್ಲಿ ಮಧು ಬಂಗಾರಪ್ಪ ಫೋಟೋ ಇದ್ದು, 58 ಸಾವಿರ ಫಾಲೋವರ್ಗಳಿದ್ದಾರೆ. ಈ ಫೇಸ್‌ಬುಕ್ ಗ್ರೂಪ್‌ ಅನ್ನು ಕುಂದಾಪುರ ವಿರಾಟ ಹೆಸರಿನ ಫೇಸ್‌ಬುಕ್ ಬಳಕೆದಾರರು ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಅಣಕಿಸುವ ಪೋಸ್ಟ್ ನಲ್ಲಿ “ಯೇ ಹೈ ಅಚ್ಚೇ ದಿನ್, ದೇಶವನ್ನು ನುಂಗಿ ನೀರು ಕುಡಿದಿದ್ದ ಕಾಂಗ್ರೆಸ್‌. ಬಹಳ ಜನ ಅಚ್ಚೇ ದಿನ್ ಎಲ್ಲಿ ಅಂತ ಕೇಳಿದ್ದರು. ಇದು ಅಚ್ಚೇ ದಿನ್ ನೋಡಿ ಖುಷಿ ಪಡಿ ಎಂದು ಬರೆದುಕೊಳ್ಳಲಾಗಿದೆ.
ಈ ಸಂಬಂಧ ಕಾಂಗ್ರೆಸ್ ಮುಖಂಡ ಜಿ.ಡಿ ಮಂಜುನಾಥ್ ಎಂಬುವರು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಐಟಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply

Your email address will not be published.

error: Content is protected !!